ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ | ಟಿಪ್ಪರ್‌– ಕಾರ್‌ ಡಿಕ್ಕಿ: ಇಬ್ಬರ ಸಜೀವ ದಹನ

ಮದುವೆ ಮುಗಿಸಿಕೊಂಡು ಬರುತ್ತಿದ್ದವರು ಮಸಣದ ಕಡೆಗೆ
Published 7 ಡಿಸೆಂಬರ್ 2023, 16:27 IST
Last Updated 7 ಡಿಸೆಂಬರ್ 2023, 16:27 IST
ಅಕ್ಷರ ಗಾತ್ರ

ಬೆಳಗಾವಿ: ತಾಲ್ಲೂಕಿನ ಬಂಗರಗಾ– ದೇವಗಿರಿ ಕ್ರಾಸ್‌ ಬಳಿ ಬುಧವಾರ ರಾತ್ರಿ ಟಿಪ್ಪರ್‌ ಹಾಗೂ ಕಾರ್‌ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಒಬ್ಬ ಬಾಲಕಿ ಹಾಗೂ ಒಬ್ಬ ಯುವಕ ಸಜೀವ ದಹನವಾಗಿದ್ದಾರೆ.

ಬೆಳಗಾವಿ ತಾಲ್ಲೂಕಿನ ಬಂಬರಗಾ ಗ್ರಾಮದ ಮೋಹನ್ ಮಾರುತಿ ಬೆಳಗಾಂವಕರ್ (24) ಹಾಗೂ ಮಚ್ಚೆ ಗ್ರಾಮದ ಬಾಲಕಿ ಸಮೀಕ್ಷಾ (12) ಮೃತರು. ಮಹೇಶ್ ಬೆಳಗಾಂವಕರ್ ಮತ್ತು ಸ್ನೇಹಾ ಬೆಳಗುಂದಕರ್‌ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಈ ಇಬ್ಬರೂ ತಮ್ಮ ಸಂಬಂಧಿಕರೊಬ್ಬರ ಮದುವೆ ಮುಗಿಸಿಕೊಂಡು ಬುಧವಾರ ರಾತ್ರಿ ಬಂಬರಗಾ ಗ್ರಾಮಕ್ಕೆ ಮರಳುತ್ತಿದ್ದರು. ಊರು ಕೆಲವೇ ನಿಮಿಷಗಳಷ್ಟು ದೂರ ಇರುವಾಗ, ದೇವಗಿರಿ ಕ್ರಾಸ್‌ ಬಳಿ ಟಿಪ್ಪರ್‌ ಅಡ್ಡ ಬಂತು. ಇಬ್ಬರೂ ಚಾಲಕರ ನಿಯಂತ್ರಣ ತಪ್ಪಿ ವಾಹನಗಳು ಡಿಕ್ಕಿಯಾದವು.

ಅಪಘಾತದ ರಭಸಕ್ಕೆ ಟಿಪ್ಪರ್‌ನ ಡಿಸೇಲ್ ಟ್ಯಾಂಕ್ ಒಡೆದು ಬೆಂಕಿ ಹೊತ್ತಿಕೊಂಡಿತು. ಈ ವೇಳೆ ಕಾರಿನಲ್ಲಿದ್ದ ನಾಲ್ವರು ಪೈಕಿ ಇಬ್ಬರು ಸಜೀವ ದಹನವಾದರು. ಗಂಭೀರ ಗಾಯಗೊಂಡ ಮತ್ತಿಬ್ಬರನ್ನು ಸ್ಥಳೀಯರು ರಕ್ಷಣೆ ಮಾಡಿದರು. ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಅಷ್ಟರೊಳಗೆ ಇಬ್ಬರ ದೇಹಗಳು ಕರಕಲಾಗಿದ್ದವು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಡಿಸಿಪಿ ಸ್ನೇಹಾ, ಕಾಕತಿ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು. ಶವಗಳನ್ನು ಬಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಟಿಪ್ಪರ್‌ ಚಾಲಕ ರಾತ್ರಿಯೇ ಕಾಕತಿ ‌ಪೊಲೀಸ್ ಠಾಣೆಗೆ ಶರಣಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT