ಭಾನುವಾರ, ಅಕ್ಟೋಬರ್ 25, 2020
23 °C

ಇಬ್ಬರು ‘ನಕಲಿ ಅಭ್ಯರ್ಥಿಗಳು’ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಪೊಲೀಸ್ ಕಾನ್‌ಸ್ಟೆಬಲ್‌ ಹುದ್ದೆಗಳಿಗೆ ಇಲ್ಲಿ ಭಾನುವಾರ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ, ಇಬ್ಬರು ನಕಲಿ ಅಭ್ಯರ್ಥಿಗಳನ್ನು ಪೊಲೀಸರು ಪತ್ತೆ ಹಚ್ಚಿ ಅವರನ್ನು ವಶಕ್ಕೆ ಪಡೆದಿದ್ದಾರೆ.

ಜೈನ್‌ ಕಾಲೇಜು ಹಾಗೂ ವಸಂತರಾವ್‌ ಪೋತದಾರ್‌ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ನೋಂದಾಯಿಸಿದ್ದ ಇಬ್ಬರ ಬದಲಿಗೆ ಬೇರೆಯವರು ಪರೀಕ್ಷೆಗೆ  ಹಾಜರಾಗಲು ಬಂದಿದ್ದರು. ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸುವ ವೇಳೆ ಅವರು ಸಿಕ್ಕಿಬಿದ್ದಿದ್ದಾರೆ. ಅವರ ಹೆಸರುಗಳನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಉಳಿದಂತೆ ಪರೀಕ್ಷೆ ಸುಗಮವಾಗಿ ನಡೆದಿದೆ. ನೋಂದಾಯಿಸಿಕೊಂಡಿದ್ದ 6,909 ಅಭ್ಯರ್ಥಿಗಳ ಪೈಕಿ 5,760 ಮಂದಿ ಹಾಜರಾಗಿದ್ದರು’ ಎಂದು ನಗರ ‍ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್‌ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು