ಸೋಮವಾರ, ಅಕ್ಟೋಬರ್ 18, 2021
23 °C

ಬಾಲಕಿ ಸಾವು: ವಾಮಾಚಾರದ ಶಂಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಜಿಲ್ಲೆಯ ಅಥಣಿ ತಾಲ್ಲೂಕಿನ ಹಲ್ಯಾಳ ಗ್ರಾಮದ ಸಮೀಪ ರಸ್ತೆ ಪಕ್ಕದ ಕಬ್ಬಿನ ಗದ್ದೆಯಲ್ಲಿ ಅರೆಪ್ರಜ್ಞಾವಸ್ಥೆ ಮತ್ತು ಬೆತ್ತಲೆ ಸ್ಥಿತಿಯಲ್ಲಿ ಸೆ.23ರಂದು ಪತ್ತೆಯಾಗಿದ್ದ 2 ವರ್ಷದ ಬಾಲಕಿ ಚಿಕಿತ್ಸೆಗೆ ಸ್ಪಂದಿಸದೆ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ತಡರಾತ್ರಿ ಅಸುನೀಗಿದ್ದಾಳೆ.

ಎ‌ಸ್ಪಿ ಲಕ್ಷ್ಮಣ ನಿಂಬರಗಿ ಈ ವಿಷಯವನ್ನು ‘ಪ್ರಜಾವಾಣಿ’ಗೆ ಖಚಿತಪಡಿಸಿದ್ದಾರೆ.

ಬಾಲಕಿಯ ಗುಪ್ತಾಂಗವೂ ಸೇರಿ ಮೈಮೇಲೆ ಅಲ್ಲಲ್ಲಿ ಸುಟ್ಟ ಗಾಯಗಳು ಕಂಡುಬಂದಿದ್ದವು. ಸ್ಥಳೀಯರು ನೀಡಿದ್ದ ಮಾಹಿತಿ ಆಧರಿಸಿ ಪೊಲೀಸರು ಆಕೆಯನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದರು. ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಪೋಷಕರ ಪತ್ತೆಗೆ ಪೊಲೀಸರು ಹಲವು ರೀತಿಯಲ್ಲಿ ಪ್ರಯತ್ನಪಟ್ಟಿದ್ದರು. ನೆರೆಯ ಮಹಾರಾಷ್ಟ್ರದ ಪೊಲೀಸ್ ಠಾಣೆಗಳಿಗೂ ಫೋಟೊ ಮತ್ತು ವಿಡಿಯೊಗಳನ್ನು ಕಳುಹಿಸಿ, ಗುರುತು ಪತ್ತೆಗೆ ಸಹಕರಿಸುವಂತೆ ಕೋರಿದ್ದರು. ಆದರೆ ಯಾವುದೇ  ಸ್ಪಷ್ಟ ಮಾಹಿತಿ ಸಿಕ್ಕಿಲ್ಲ.

ದುಷ್ಕರ್ಮಿಗಳು ಬಾಲಕಿಯನ್ನು ಕ್ಯಾರೆ ಬೀಜದಿಂದ ಸುಟ್ಟು, ವಾಮಾಚಾರಕ್ಕೆ ಬಳಸಿರುವ ಶಂಕೆ ವ್ಯಕ್ತವಾಗಿದೆ. ಮಗು ಪತ್ತೆಯಾಗಿ ಹಲವು ದಿನಗಳು ಕಳೆದಿದ್ದರೂ ಪೋಷಕರು ಪೊಲೀಸರ ಬಳಿಗೆ ಬಂದಿಲ್ಲ.
ಅಪಹರಣ ಪ್ರಕರಣವನ್ನಾಗಲಿ ಅಥವಾ ನಾಪತ್ತೆ ಪ್ರಕರಣವನ್ನಾಗಲಿ ದಾಖಲಿಸಿಲ್ಲ. ಹೀಗಾಗಿ, ಪೋಷಕರೇ ಮಗುವನ್ನು ವಾಮಾಚಾರಕ್ಕೆ ಬಳಸಿರಬಹುದು ಎಂದೂ ‍ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಆ ಆಯಾಮದಲ್ಲೂ ತನಿಖೆ ನಡೆಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು