ಬೆಳಗಾವಿ: ‘ಪಾಕಿಸ್ತಾನ, ಬಾಂಗ್ಲಾ ದೇಶದ ಉಸ್ತುವಾರಿ ಸಚಿವ ಸ್ಥಾನ ನೀಡಲು ಆಗುವುದಿಲ್ಲ’.

– ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನಗಳ ಹಂಚಿಕೆ ವಿಷಯದಲ್ಲಿ ಕೆಲವರು ಅಸಮಾಧಾನ ವ್ಯಕ್ತಪಡಿಸಿರುವುದಕ್ಕೆ ಸಂಬಂಧಿಸಿದಂತೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಉಮೇಶ ಕತ್ತಿ ಮೇಲಿನಂತೆ ಪ್ರತಿಕ್ರಿಯಿಸಿದರು.

ಹುಕ್ಕೇರಿ ತಾಲ್ಲೂಕಿನ ಹುಲ್ಲೋಳಿ ಗ್ರಾಮದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಂಗಳವಾರ ಮಾತನಾಡಿದ ಅವರು, ‘ನನಗೆ ವಿಜಯಪುರ ಜಿಲ್ಲಾ ಉಸ್ತುವಾರಿ ವಹಿಸಿರುವುದು ತೃಪ್ತಿ ತಂದಿದೆ. ಅಲ್ಲಿಗೆ ಹೋಗಿ ಜವಾಬ್ದಾರಿ ನಿರ್ವಹಿಸುತ್ತೇನೆ’ ಎಂದರು.

‘ಸಂಪುಟ ವಿಸ್ತರಣೆ ಅಥವಾ ಪುನರ್‌ರಚನೆ ಮಾಧ್ಯಮದ ಸೃಷ್ಟಿ. ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಬಳಿಕ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಹಿರಿಯ ಸಚಿವರನ್ನು ಸಂಪುಟದಿಂದ ಕೈಬಿಡುವುದು, ಇರಿಸಿಕೊಳ್ಳುವುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಅದಕ್ಕೆ ನಾವೆಲ್ಲರೂ ಬದ್ಧ’ ಎಂದು ಪ್ರತಿಕ್ರಿಯಿಸಿದರು.

ರಷ್ಯಾದಲ್ಲಿ ಪುಟಿನ್ ಟೀಕಾಕಾರ ಅಲೆಕ್ಸಿ ನವಾಲ್ನಿ ಹೆಸರು ಉಗ್ರರ ಪಟ್ಟಿಗೆ ಸೇರ್ಪಡೆ!

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.