ಬೆಳಗಾವಿ: ಮತ್ತೆ ಪ್ರತ್ಯೇಕ ರಾಜ್ಯಕ್ಕಾಗಿ ಶಾಸಕ, ಬಿಜೆಪಿಯ ಉಮೇಶ ಕತ್ತಿ ಧ್ವನಿ ಎತ್ತಿದ್ದಾರೆ. ಉತ್ತರ ಕರ್ನಾಟಕದ 13 ಜಿಲ್ಲೆಗಳು ಹಾಗೂ ಅದಕ್ಕೆ ಹೊಂದಿಕೊಂಡಿರುವ ದಕ್ಷಿಣ ಮಹಾರಾಷ್ಟ್ರದ ಮೂರು ಜಿಲ್ಲೆಗಳನ್ನು ಸೇರಿಸಿ ಪ್ರತ್ಯೇಕ ರಾಜ್ಯ ರಚಿಸುವಂತೆ ಅವರು ಸಲಹೆ ನೀಡಿದ್ದಾರೆ.

ಜಿಲ್ಲೆಯ ಸಂಕೇಶ್ವರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಉತ್ತರ ಕರ್ನಾಟಕದ ಜಿಲ್ಲೆಗಳ ಜೊತೆಗೆ ಮಹಾರಾಷ್ಟ್ರದ ಕೊಲ್ಹಾಪುರ, ಸೊಲ್ಲಾಪುರ ಹಾಗೂ ಸಾಂಗ್ಲಿ ಜಿಲ್ಲೆಗಳನ್ನು ಸೇರಿಸಿಕೊಂಡು ಪ್ರತ್ಯೇಕ ರಾಜ್ಯ ರಚಿಸಿದರೆ ಈ ಭಾಗದ ಅಭಿವೃದ್ಧಿಯಾಗುತ್ತದೆ’ ಎಂದು ಒತ್ತಾಯಿಸಿದರು.

‘ಮಹದಾಯಿ ಹರಿಯುವ ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ಇದರ ಜೊತೆ ಕೇಂದ್ರದಲ್ಲಿಯೂ ಸರ್ಕಾರವಿದೆ. ಈ ಅವಕಾಶವನ್ನು ಬಳಸಿಕೊಂಡು ತಕ್ಷಣ ಮಹದಾಯಿ ಬಿಕ್ಕಟ್ಟು ಬಗೆಹರಿಸಲು ಕ್ರಮಕೈಗೊಳ್ಳಬೇಕು’ ಎಂದು ಕೋರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.