ಘಟಪ್ರಭಾ: ಸಮೀಪದ ಶಿಂದಿಕುರಬೇಟ ಗ್ರಾಮದಲ್ಲಿ ಅನಧಿಕೃತ ಆನ್‌ಲೈನ್ ಕೇಂದ್ರದ ಮೇಲೆ ಗ್ರಾಮ ಆಡಳಿತಾಧಿಕಾರಿ ಹಾಗೂ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ತಂಡ ದಾಳಿ ನಡೆಸಿ ಬೀಗ ಹಾಕಿದೆ.

ಸರ್ಕಾರದಿಂದ ಅನುಮತಿ ಪಡೆಯದೇ ಅರಭಾವಿ ಗ್ರಾಮದ ಆನಂದ ಕಡ್ಡಿ ಎಂಬುವವರಿಗೆ ಸೇರಿದ ಕೇಂದ್ರ ಕೆಲವು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿತ್ತು. ಆಧಾರ್, ಪಡಿತರ, ಪಾನ್ ತಿದ್ದುಪಡಿ ಹಾಗೂ ಹೊಸ ಅರ್ಜಿಗಳನ್ನು ಪಡೆಯಲು ಸಾರ್ವಜನಿಕರಿಂದ ನಿಗದಿಗಿಂತ ಹೆಚ್ಚು ಶುಲ್ಕ ವಸೂಲಿ ಮಾಡುತ್ತಿರುವ ಕುರಿತು ಸಾರ್ವಜನಿಕರು ತಹಶೀಲ್ದಾರ್‌ಗೆ ದೂರು ನೀಡಿದ್ದರು.

ಗ್ರಾಮ ಆಡಳಿತಾಧಿಕಾರಿ ಬಿ.ಎಲ್.ಕೆಂಚರಡ್ಡಿ, ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಯಲ್ಲಪ್ಪ ಮೂಡಲಗಿ ಹಾಜರಿದ್ದು, ಮೇಲಧಿಕಾರಿಗಳಿಗೆ ಮಾಹಿತಿ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.