ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿ ಕೋರ್ಟ್‌ನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರಣಾಧೀನ ಕೈದಿ: ಥಳಿತ

ವಿಚಾರಣೆಗಾಗಿ ಕರೆತಂದಿದ್ದ ಕೈದಿಯೊಬ್ಬ ಬೆಳಗಾವಿ ನ್ಯಾಯಾಲಯ ಆವರಣದಲ್ಲಿ ಬುಧವಾರ ಬೆಳಿಗ್ಗೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದರಿಂದ ವಕೀಲರು ಹಾಗೂ ಜನರು ಥಳಿಸಿದ್ದಾರೆ.
Published 12 ಜೂನ್ 2024, 7:20 IST
Last Updated 12 ಜೂನ್ 2024, 7:20 IST
ಅಕ್ಷರ ಗಾತ್ರ

ಬೆಳಗಾವಿ: ವಿಚಾರಣೆಗಾಗಿ ಕರೆತಂದಿದ್ದ ಕೈದಿಯೊಬ್ಬ ಬೆಳಗಾವಿ ನ್ಯಾಯಾಲಯ ಆವರಣದಲ್ಲಿ ಬುಧವಾರ ಬೆಳಿಗ್ಗೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದರಿಂದ ವಕೀಲರು ಹಾಗೂ ಜನರು ಥಳಿಸಿದ್ದಾರೆ.

ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿ ಜಯೇಶ್ ಪೂಜಾರಿ ಎಂಬಾತನನ್ನು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಆಗ, 'ನ್ಯಾಯಾಲಯದಲ್ಲಿ ನನ್ನ ಅಹವಾಲು ಸ್ವೀಕರಿಸುತ್ತಿಲ್ಲ' ಎಂದು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ‌. ಆಗ ವಕೀಲರು ಮತ್ತು ಜನರು ಹೊಡೆಯುತ್ತಿದ್ದಂತೆ, ಕೈದಿಯನ್ನು ರಕ್ಷಿಸಿದ ಪೊಲೀಸರು ಎಪಿಎಂಸಿ ಠಾಣೆಗೆ ಕರೆದೊಯ್ದರು. ಅಲ್ಲಿ ವಿಚಾರಣೆ ಮುಂದುವರಿದಿದೆ.

ಜಯೇಶ್ ಪೂಜಾರಿ ಈ ಹಿಂದೆ ಜೈಲಿನಲ್ಲಿ ಇದ್ದುಕೊಂಡೇ, ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಬೆದರಿಕೆ ಕರೆ ಹಾಕಿದ್ದ‌.

'ತಾನು ದಾವೂದ್ ಇಬ್ರಾಹಿಂ ತಂಡದಲ್ಲಿದ್ದೇನೆ' ಎಂದೂ ಹೇಳಿಕೊಂಡಿದ್ದ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT