ತಂದೆಯ ಸಾವು ಅಸ್ವಾಭಾವಿಕ: ಸಂಭಾಜಿ ಪಾಟೀಲ ಪುತ್ರಿಯ ದೂರು

ಮಂಗಳವಾರ, ಜೂನ್ 25, 2019
27 °C

ತಂದೆಯ ಸಾವು ಅಸ್ವಾಭಾವಿಕ: ಸಂಭಾಜಿ ಪಾಟೀಲ ಪುತ್ರಿಯ ದೂರು

Published:
Updated:

ಬೆಳಗಾವಿ: ‘ನನ್ನ ತಂದೆಯ ಸಾವು ಅಸ್ವಾಭಾವಿಕವಾಗಿದ್ದು, ಸಾವಿಗೆ ಕಾರಣವೇನು ಎನ್ನುವುದು ಗೊತ್ತಾಗಬೇಕಾಗಿದೆ’ ಎಂದು ಮಾಜಿ ಶಾಸಕ ಸಂಭಾಜಿ ಪಾಟೀಲ ಅವರ ಪುತ್ರಿ ಸಂಧ್ಯಾ ಪಾಟೀಲ ಇಲ್ಲಿನ ಎಪಿಎಂಸಿ ಠಾಣೆಯಲ್ಲಿ ಶನಿವಾರ ದೂರು ದಾಖಲಿಸಿದ್ದಾರೆ.

ಹಲವು ವರ್ಷಗಳಿಂದ ಸಂಭಾಜಿ ಪಾಟೀಲ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದರು. ಶುಕ್ರವಾರ ರಾತ್ರಿ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದರು. ಮೂತ್ರ ಪಿಂಡ ವೈಫಲ್ಯದಿಂದ ಸಾವು ಸಂಭವಿಸಿದೆ ಎಂದು ಕೆಲವರು ಹೇಳುತ್ತಿದ್ದರೆ, ಇನ್ನು ಕೆಲವರು ಹೃದಯಾಘಾತದಿಂದ ಸಂಭವಿಸಿದೆ ಎಂದು ಹೇಳುತ್ತಿದ್ದರು.

ಸಂಧ್ಯಾ ಅವರ ದೂರಿನ ಹಿನ್ನೆಲೆಯಲ್ಲಿ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿ, ಪಾರ್ಥಿವ ಶರೀರವನ್ನು ಸಂಬಂಧಿಕರಿಗೆ ಹಸ್ತಾಂತರಿಸಿದರು. ನಂತರ ಅಂತ್ಯಕ್ರಿಯೆ ನಡೆಯಿತು.

‘ಸಂಧ್ಯಾ ಅವರು ಯಾರ ಮೇಲೂ ಸಂಶಯ ವ್ಯಕ್ತಪಡಿಸಿಲ್ಲ. ಸಾವಿಗೆ ಏನು ಕಾರಣ ಎನ್ನುವುದನ್ನು ತಿಳಿಯಲು ಬಯಸಿದ್ದಾರೆ’ ಎಂದು ಡಿಸಿಪಿ (ಅಪರಾಧ– ಸಂಚಾರ) ಯಶೋಧಾ ವಂಟಗೂಡಿ ತಿಳಿಸಿದರು.

 

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !