ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿ ಪಾಲಿಕೆಯ 4 ಸ್ಥಾಯಿ ಸಮಿತಿಗಳಿಗೂ ಅವಿರೋಧ ಆಯ್ಕೆ

Published 9 ಜುಲೈ 2024, 11:51 IST
Last Updated 9 ಜುಲೈ 2024, 11:51 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆ 22ನೇ ಅವಧಿಗೆ ನಾಲ್ಕು ಸ್ಥಾಯಿ ಸಮಿತಿಗಳಿಗೆ ಮಂಗಳವಾರ ಅಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ನೇತ್ರಾವತಿ ಭಾಗವತ, ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶ್ರೀಶೈಲ ಕಾಂಬಳೆ, ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಜಯತೀರ್ಥ ಸವದತ್ತಿ ಹಾಗೂ ಲೆಕ್ಕಗಳ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ರೇಷ್ಮಾ ಕಾಮಕರ ಆಯ್ಕೆಯಾದರು.

ಮೇಯರ್‌ ಸವಿತಾ ಕಾಂಬಳೆ ಅಧ್ಯಕ್ಷತೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ನಾಲ್ಕೂ ಅಧ್ಯಕ್ಷ ಸ್ಥಾನಗಳಿಗೆ ತಲಾ ಒಂದು ನಾಮಪತ್ರ ಸಲ್ಲಿಕೆಯಾದವು.

ನಾಲ್ಕು ಸ್ಥಾಯಿ ಸಮಿತಿಗಳ ತಲಾ ಏಳು ಸದಸ್ಯ ಸ್ಥಾನಗಳಿಗೂ ಜುಲೈ 2ರಂದು ಅವಿರೋಧ ಆಯ್ಕೆ ನಡೆದಿತ್ತು. ಪ್ರತಿ ಸಮಿತಿಯಲ್ಲಿ ಬಿಜೆಪಿಯ ಐವರು ಮತ್ತು ವಿರೋಧ ಪಕ್ಷದ ಇಬ್ಬರು ಸದಸ್ಯರಿದ್ದಾರೆ. ಮುಂದಿನ 1 ವರ್ಷದ ಅವಧಿಗೆ ಇವರೆಲ್ಲರೂ ಕಾರ್ಯನಿರ್ವಹಿಸಲಿದ್ದಾರೆ.

ನೂತನ ಅಧ್ಯಕ್ಷರನ್ನು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಅನಿಲ ಬೆನಕೆ ಅಭಿನಂದಿಸಿದರು. ಉಪಮೇಯರ್‌ ಆನಂದ ಚವ್ಹಾಣ, ಪಾಲಿಕೆ ಆಡಳಿತ ಪಕ್ಷದ ನಾಯಕ ಗಿರೀಶ ಧೊಂಗಡಿ, ವಿರೋಧ ಪಕ್ಷದ ನಾಯಕ ಮುಜಮ್ಮಿಲ್‌ ಡೋಣಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT