ಬೆಳಗಾವಿ: ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ನೆನಪಿಗಾಗಿ ಇಲ್ಲಿನ ಸುವರ್ಣ ವಿಧಾನಸೌಧದ ಅಂಗಳದಲ್ಲಿ ಪ್ರತಿಷ್ಠಾಪಿಸಿದ ಮಹಾತ್ಮ ಗಾಂಧೀಜಿ ಪ್ರತಿಮೆ ಮಂಗಳವಾರ ಅನಾವರಣಗೊಂಡಿತು.

ಮಧ್ಯಾಹ್ನ 12ಕ್ಕೆ ಚರಕ ತಿರುಗಿಸುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರತಿಮೆ ಅನಾವರಣಗೊಳಿಸಿದರು.

ಜನರಿಗೆ ಬಾಪೂಜಿ ದರ್ಶನವಾಗುತ್ತಿದ್ದಂತೆ, ಬಣ್ಣ-ಬಣ್ಣದ ಸಿಡಿಮದ್ದುಗಳನ್ನು ಹಾರಿಸಿ ಸಂಭ್ರಮಿಸಲಾಯಿತು. ಇದೇ ವೇಳೆ, ಗದುಗಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಲಾಂಛನ ಬಿಡುಗಡೆಗೊಳಿಸಲಾಯಿತು.

ಕಾಂಗ್ರೆಸ್ ನಾಯಕಿ, ಸಂಸದೆ ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಸತೀಶ ಜಾರಕಿಹೊಳಿ, ಜಿ.ಪರಮೇಶ್ವರ, ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಇತರರಿದ್ದರು. ಅಧಿವೇಶನದ ಶತಮಾನೋತ್ಸವ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ ಸ್ವಾಗತಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.