ಚಿಕ್ಕೋಡಿ: ‘ತಾಲ್ಲೂಕಿನ ಹಿರೇಕೋಡಿ, ಅಂಕಲಿ ಹಾಗೂ ಖಡಕಲಾಟ ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಯನ್ನಾಗಿ ಹಾಗೂ ಚಿಕ್ಕೋಡಿ ಸದಲಗಾ ಶಾಸಕ ಗಣೇಶ ಹುಕ್ಕೇರಿ ಪ್ರಯತ್ನದಿಂದ ಸರ್ಕಾರ ಮೇಲ್ದರ್ಜೆಗೇರಿಸಿದ್ದು ಶ್ಲಾಘನೀಯ’ ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಹೇಳಿದರು.

ತಾಲ್ಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗ್ರಾಮ ಪಂಚಾಯಿತಿಯಿಂದ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಯಿಂದ ನಗರೋತ್ಥಾನ, ಎಸ್ಎಫ್ಸಿ ಹಾಗೂ 15ನೇ ಹಣಕಾಸು ಯೋಜನೆ ಅಡಿಯಲ್ಲಿ ಹೆಚ್ಚಿನ ಅನುದಾನದಿಂದ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಾಧ್ಯವಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮನವೊಲಿಸಿ ಮೇಲ್ದರ್ಜೆಗೇರಿಸಲಾಗಿದೆ’ ಎಂದರು.

‘ಮೇಲ್ದರ್ಜೇಗೇರಿದ ಖಡಕಲಾಟ, ಅಂಕಲಿ, ಹಿರೇಕೋಡಿ ಪಟ್ಟಣ ಪಂಚಾಯಿತಿಗಳ ಅಭಿವೃದ್ಧಿ ಕಾರ್ಯಕ್ಕೆ ತಲಾ ₹5 ಕೋಟಿ ಅನುದಾನ ನೀಡುವಂತೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ ಅವರಿಗೆ ಪತ್ರ ಬರೆಯಲಾಗುವುದು’ ಎಂದರು.

‘ಮುಂಬರುವ ದಿನಗಳಲ್ಲಿ ಚಿಕ್ಕೋಡಿ ಹಾಗೂ ಸದಲಗಾ ಪುರಸಭೆಗಳನ್ನು ಶೀಘ್ರದಲ್ಲಿ ನಗರಸಭೆಗಳನ್ನಾಗಿ, ಯಕ್ಸಂಬಾ ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸುವ ಪ್ರಯತ್ನ ಮಾಡಲಾಗುತ್ತಿದೆ. ಇವುಗಳು ಶೀಘ್ರದಲ್ಲಿಯೇ ಮೇಲ್ದರ್ಜೆಗೇರುವ ಮೂಲಕ ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದು’ ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.