ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮೂಡಲಗಿ: ಪ್ರವಾಹ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸಲು ಒತ್ತಾಯ

Published 12 ಆಗಸ್ಟ್ 2024, 16:10 IST
Last Updated 12 ಆಗಸ್ಟ್ 2024, 16:10 IST
ಅಕ್ಷರ ಗಾತ್ರ

ಮೂಡಲಗಿ: ಮೂಡಲಗಿ ತಾಲ್ಲೂಕಿನ ಹಾಗೂ ಅರಭಾವಿ ಕ್ಷೇತ್ರದಲ್ಲಿ ಘಟಪ್ರಭಾ ನದಿಯ ಪ್ರವಾಹದಿಂದ ರೈತರ ಬದುಕು ಆತಂಕದಲ್ಲಿದ್ದು, ಪ್ರವಾಹ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಕರುನಾಡ ರಕ್ಷಣಾ ವೇದಿಕೆ ರಾಜ್ಯ ಕಾರ್ಯದರ್ಶಿ ಮಂಜುನಾಥ ಜಲ್ಲಿ ನೇತೃತ್ವದಲ್ಲಿ ಪದಾಧಿಕಾರಿಗಳು ಮೂಡಲಗಿ ತಹಶೀಲ್ದಾರ್‌ಗೆ ಸೋಮವಾರ ಮನವಿ ಸಲ್ಲಿಸಿದರು.‌

ರಾಜ್ಯ ಮತ್ತು ಕೇಂದ್ರ ಸರಕಾರ ಬೆಳೆಹಾನಿ ಮತ್ತು ಮುಂತಾದ ತೊಂದರೆಗಳಿಗೆ ಶಾಶ್ವತ ಪರಿಹಾರ ಕೊಡುವಲ್ಲಿ ಎನ್‌ಡಿಆರ್‌ಎಸ್‌ನ ಮಾರ್ಗಸೂಚಿಯು ಸಂಪೂರ್ಣ ಅವೈಜ್ಞಾನಿಕವಾಗಿದ್ದು, ಅದರಿಂದ ಯೋಗ್ಯ ಪರಿಹಾರ ದೊರೆಯುವುದು ಸಾಧ್ಯವಿಲ್ಲ ಎಂದರು.

ರೈತರ ಬೆಳೆಗಳು ಸಂಪೂರ್ಣವಾಗಿ ನಾಶವಾಗಿದ್ದು ಹಾಗೂ ಘಟಪ್ರಭಾ ನದಿ ತೀರದ ಸುಮಾರು 30 ಗ್ರಾಮಗಳ ರೈತರಿಗೂ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗಿದೆ. ಹಾನಿಗೊಳಗಾದ ಬೆಳೆ ಸಮೀಕ್ಷೆ ಶೀಘ್ರ ನಡೆಸಿ, ಕುಟುಂಬಸ್ಥರಿಗೆ ಪರಿಹಾರ ಧನ ನೀಡಬೇಕು ಎಂದು ಒತ್ತಾಯಿಸಿದರು.

ಪ್ರವಾಹಕ್ಕೆ ತುತ್ತಾಗುವ ಗ್ರಾಮಗಳನ್ನು ಎತ್ತರದ ಪ್ರದೇಶಗಳಿಗೆ ಸ್ಥಳಾಂತರಗೊಳಿಸಿ, ಅಲ್ಲಿ ಕುಟುಂಬಗಳಿಗೆ ಮನೆಗಳನ್ನು ನಿರ್ಮಾಣ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ತಹಶೀಲ್ದಾರ್ ಪರವಾಗಿ ಕಚೇರಿಯ ಶಿರಸ್ತೇದಾರ ಪರುಶರಾಮ ನಾಯಿಕ ಅವರು ಮನವಿ ಸ್ವೀಕರಿಸಿದರು.

ಸಿದ್ದು ಕಂಕನವಾಡಿ, ಮಲ್ಲಿಕಾರ್ಜುನ ಮರಕುಂಬಿ, ಸಿದ್ದಮ್ಮ ಕಟ್ಟಿಕಾರ, ಲಕ್ಷ್ಮೀ ಹಾದಿಮನಿ ಇದ್ದರು.

ಗೋಕಾಕ ವರದಿ: ನೆರೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಗೋಕಾಕದಲ್ಲಿ ಸೋಮವಾರ ಕರುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದ ರಾಜ್ಯ ಘಟಕದ ಅಧ್ಯಕ್ಷೆ ಸಿದ್ದವ್ವ ಕಟ್ಟಿಕಾರ ನೇತೃತ್ವದಲ್ಲಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. 

ವೇದಿಕೆಯ ಸಂಸ್ಥಾಪಕ, ರಾಜ್ಯ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಮರಕುಂಬಿ, ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT