ಖಾನಾಪುರ: ಜೈ ಜವಾನ್, ಜೈ ಕಿಸಾನ್ ಎಂಬ ಘೋಷವಾಕ್ಯದಂತೆ ಗಡಿಕಾಯುವ ಸೈನಿಕರನ್ನು ಮತ್ತು ಅನ್ನದಾತರನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಶಾಸಕ ವಿಠ್ಠಲ ಹಲಗೇಕರ ಕರೆ ನೀಡಿದರು.

ಸ್ಥಳೀಯ ರೈತ ಸಂಪರ್ಕ ಕೇಂದ್ರದ ಆವರಣದಲ್ಲಿ ಗುರುವಾರ ಭತ್ತದ ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮಕ್ಕೆ ಅವರು ಭತ್ತದ ಬೀಜದ ಚೀಲಗಳಿಗೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು.

‘ಈ ವರ್ಷ ತಾಲ್ಲೂಕಿನಲ್ಲಿ ಮುಂಗಾರು ಮಳೆ ಒಂದು ವಾರ ಮುಂಚಿತವಾಗಿ ಆಗಮಿಸಿದೆ. ಮಳೆ ಸ್ವಲ್ಪ ವಿರಾಮ ನೀಡಿದರೆ ಬಿತ್ತನೆಗೆ ಅನುಕೂಲ ಆಗಲಿದೆ. ಕೃಷಿ ಇಲಾಖೆಯಿಂದ ಈಗಾಗಲೇ ಸಾಕಷ್ಟು ಪ್ರಮಾಣದಲ್ಲಿ ಭತ್ತ ಹಾಗೂ ಗೋವಿನಜೋಳ ಬೆಳೆಗಳ ಬೀಜಗಳನ್ನು ದಾಸ್ತಾನು ಮಾಡಲಾಗಿದೆ. ಬಿತ್ತನೆ ಬೀಜದ ಕೊರತೆ ಆಗದಂತೆ ಗಮನಹರಿಸಲು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ರೈತರು ಪ್ರಮಾಣಿಕೃತ ಮತ್ತು ಗುಣಮಟ್ಟದ ಬಿತ್ತನೆ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳಿಂದ ಬೀಜ ಪಡೆಯಬೇಕು’ ಎಂದರು.

ಸಹಾಯಕ ಕೃಷಿ ನಿರ್ದೇಶಕ ಸತೀಶ ಮಾವಿನಕೊಪ್ಪ ಮಾತನಾಡಿ, ‘ತಾಲ್ಲೂಕಿನ 4 ಕಡೆಗಳಲ್ಲಿ ಬೀಜ ವಿತರಣಾ ಕೇಂದ್ರಗಳನ್ನು ಆರಂಭಿಸಲಾಗಿದೆ. ರೈತರಿಗೆ ಕ್ಯೂಆರ್ ಕೋಡ್ ಸ್ಕ್ಯಾನಿಂಗ್ ಮೂಲಕ ಗುಣಮಟ್ಟದ ಬೀಜಗಳನ್ನು ವಿತರಿಸಲು ಗಮನಹರಿಸಲಾಗಿದೆ. ಆಧಾರ ಹಾಗೂ ಪಹಣಿ ಪತ್ರಿಕೆ ಜೊತೆಗೆ ಬೀಜ ಪಡೆಯಬೇಕು’ ಎಂದರು.

ಕಾರ್ಯಕ್ರಮದ ಅಂಗವಾಗಿ ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಶಾಸಕರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಇಲಾಖೆಯ ಸಿಬ್ಬಂದಿ ಹಾಗೂ ರೈತರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.