ಸೋಮವಾರ, ಮೇ 16, 2022
30 °C

ಸಾಮಾಜಿಕ ಜಾಲತಾಣ ಪರಿಣಾಮಕಾರಿಯಾಗಿ ಬಳಸಿಕೊಳ್ಳಿ: ರಮೇಶ ಜಾರಕಿಹೊಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಸರ್ಕಾರದ ಜನಪರ ಯೋಜನೆಗಳು ಮತ್ತು ಸಾಧನೆಗಳನ್ನು ಜನಸಾಮಾನ್ಯರಿಗೆ ಮುಟ್ಟಿಸಲು ಸಾಮಾಜಿಕ ಜಾಲತಾಣವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ನಗರದ ಗೋಮಟೇಶ್ವರ ಸಭಾಭವನದಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದಿಂದ ಭಾನುವಾರ ಆಯೋಜಿಸಿದ್ದ ಸಾಮಾಜಿಕ ಜಾಲತಾಣ ವಿಭಾಗದ ಪದಾಧಿಕಾರಿಗಳ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಸಾಮಾಜಿಕ ಜಾಲತಾಣ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಬಹುತೇಕರು ಮೊಬೈಲ್ ಮೂಲಕ ಜಾಲತಾಣಗಳನ್ನು ಬಳಸುತ್ತಿದ್ದಾರೆ. ಪಕ್ಷದ ಯುವ ಕಾರ್ಯಕರ್ತರು ದಿನ ನಿತ್ಯ ಟೀಕಾಕಾರರ ವಿರುದ್ಧ ಈ ವೇದಿಕೆಯಲ್ಲಿ ಹೋರಾಡಬೇಕು’ ಎಂದರು.

ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ‘ವಿರೋಧಿಗಳು ಬಿಜೆಪಿ ಬಗ್ಗೆ ಅಪಪ್ರಚಾರ ಮಾಡುತ್ತಿರುತ್ತಾರೆ. ಕ್ಷಣಾರ್ಧದಲ್ಲಿ ಅದರ ಸತ್ಯಾಂಶಗಳನ್ನು ಹುಡುಕಿ ಜನರಿಗೆ ಮುಟ್ಟಿಸುವ ಕೆಲಸ ಮಾಡುತ್ತಿರುವ ಪಕ್ಷದ ಸಾಮಾಜಿಕ ಜಾಲತಾಣಗಳ ಪದಾಧಿಕಾರಿಗಳ ಕಾರ್ಯ ಶ್ಲಾಘನೀಯ’ ಎಂದು ಹೇಳಿದರು.

ವಿಭಾಗದ ಸಹ ಸಂಚಾಲಕ ಪ್ರಶಾಂತ ಜಾಧವ, ಬೆಳಗಾವಿ ವಿಭಾಗದ ಸಹ ಪ್ರಭಾರಿ ಬಸವರಾಜ ಯಾಕ್ಕಂಚಿ, ಗುರು ಹುದ್ದಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ ಮೊಹಿತೆ, ಸಂದೀಪ್ ದೇಶಪಾಂಡೆ, ಕಿರಣ ಜಾಧವ, ಜಿಲ್ಲಾ ಮಾಧ್ಯಮ ಸಂಚಾಲಕ ಎಫ್.ಎಸ್. ಸಿದ್ದನಗೌಡರ, ಜಿಲ್ಲಾ ಸಾಮಾಜಿಕ ಜಾಲತಾಣದ ಸಂಚಾಲಕ ನಿತಿನ ಚೌಗಲೆ, ಸಂತೋಷ ದೇಶನೂರು, ದೇವಯಾಣಿ ಪಾಟೀಲ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು