ಬುಧವಾರ, ಸೆಪ್ಟೆಂಬರ್ 22, 2021
21 °C

ಕಂದು ರೋಗ: ಹೆಣ್ಣು ಕರುಗಳಿಗೆ ಉಚಿತ ಲಸಿಕೆ ಅಭಿಯಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ರಾಜ್ಯದ ಹಲವೆಡೆ ಪಶುಗಳಲ್ಲಿ ಕಂದು ರೋಗ (ಬ್ರುಸೆಲ್ಲೋಸಿಸ್) ಅಧಿಕವಾಗಿ ಹರಡುತ್ತಿದೆ. ಅದರ ವಿರುದ್ಧ ಹೋರಾಡಲು 6ರಿಂದ 8 ತಿಂಗಳ ಹೆಣ್ಣು ಕರುಗಳಿಗೆ ಉಚಿತವಾಗಿ ಲಸಿಕೆ ನೀಡುವ ಅಭಿಯಾನವನ್ನು ಸೆ.6ರಿಂದ 15ರವರೆಗೆ ಹಮ್ಮಿಕೊಳ್ಳಲಾಗಿದೆ’ ಎಂದು ಪಶುವೈದ್ಯಕೀಯ ಸೇವಾ ಇಲಾಖೆಯ
ಉಪ ನಿರ್ದೇಶಕ ಅಶೋಕ್ ಎಲ್. ಕೊಳ್ಳಾ ತಿಳಿಸಿದ್ದಾರೆ.

‘ಕಂದು ರೋಗವನ್ನು ನಿಯಂತ್ರಿಸಲು ಕೇಂದ್ರ ಸರ್ಕಾರವು ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಲ್ಲಿ ಅಭಿಯಾನ ಹಮ್ಮಿಕೊಂಡಿದೆ.  ಇದರ ಸದುಪಯೋಗವನ್ನು ಪಶುಪಾಲಕರು ಪಡೆದುಕೊಳ್ಳಬೇಕು’ ಎಂದು ಕೋರಿದ್ದಾರೆ.

‘ಈ ರೋಗವು ಸಾಮಾನ್ಯವಾಗಿ ಆಕಳು, ಎಮ್ಮೆ, ಕುರಿ, ಆಡು, ನಾಯಿ, ಒಂಟೆ, ಕುದುರೆ ಮೊದಲಾದವುಗಳಲ್ಲಿ ಕಂಡುಬರುವ ಬ್ಯಾಕ್ಟೀರಿಯಾ ರೋಗವಾಗಿದೆ. ಇದರಿಂದ ಜಾನುವಾರು ಸಂಪತ್ತಿಗೆ ಬಹಳಷ್ಟು ತೊಂದರೆ ಉಂಟಾಗಿ ಪಶುಪಾಲರು ಆರ್ಥಿಕವಾಗಿ ನಷ್ಟ ಅನುಭವಿಸುತ್ತಿದ್ದಾರೆ. ಇದನ್ನು ನಿಯಂತ್ರಿಸಲು ಅಭಿಯಾನ ಆರಂಭಿಸಲಾಗಿದೆ. ಎಲ್ಲ 4ರಿಂದ 8 ತಿಂಗಳ ವಯಸ್ಸಿನ ಹೆಣ್ಣು ಕರುಗಳಿಗೆ ಯುಐಡಿ ಕಿವಿಯೋಲೆ ಅಳವಡಿಸಿ ತಂತ್ರಾಂಶದಲ್ಲಿ ನೋಂದಾಯಿಸಿ ಲಸಿಕೆ ಹಾಕಲಾಗುವುದು’ ಎಂದು ಮಾಹಿತಿ ನೀಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು