ಸೋಮವಾರ, ಸೆಪ್ಟೆಂಬರ್ 21, 2020
22 °C

ವಚನ ಪುಸ್ತಕ ಮಳಿಗೆ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಇಲ್ಲಿನ ಶಿವಬಸವ ನಗರದ ಎಸ್.ಜಿ. ಬಾಳೇಕುಂದ್ರಿ ತಾಂತ್ರಿಕ ಕಾಲೇಜಿನ ಗೇಟ್‌ ನಂ.3ರ ಬಳಿಯ ವಚನ ಅಧ್ಯಯನ ಕೇಂದ್ರದಲ್ಲಿ ಆರಂಭಿಸಿರುವ ಪುಸ್ತಕ ಮಾರಾಟ ಮಳಿಗೆಯನ್ನು ಭಾನುವಾರ ಉದ್ಘಾಟಿಸಲಾಯಿತು.

ಡಂಬಳ-ಗದಗ ತೋಂಟದಾರ್ಯ ಮಠದ ತೋಂಟದ ಸಿದ್ಧರಾಮ ಸ್ವಾಮೀಜಿ ಟೇಪ್‌ ಕತ್ತರಿಸಿದರು. ನಾಗನೂರು ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಎಸ್‌ಜಿಬಿಐಟಿ ಪ್ರಾಂಶುಪಾಲ ಪ್ರೊ.ಸಿದ್ರಾಮಪ್ಪ ವಿ.ಇಟ್ಟಿ ಇದ್ದರು.

‘ಮಳಿಗೆಯಲ್ಲಿ ವಚನ ಸಾಹಿತ್ಯ, ಧರ್ಮ, ತತ್ತ್ವಶಾಸ್ತ್ರ, ಅಧ್ಯಾತ್ಮ ಮೊದಲಾದ ವಿಷಯಗಳಿಗೆ ಸಂಬಂಧಿಸಿದ ಮೌಲಿಕ ಗ್ರಂಥಗಳು, ಪೂಜಾ ಸಾಮಗ್ರಿಗಳು, ವಿಭೂತಿ, ಲಿಂಗಗಳು, ರುದ್ರಾಕ್ಷಿಗಳು, ಶರಣರ ಫೋಟೊಗಳು ಮಾರಾಟಕ್ಕೆ ಲಭ್ಯ ಇವೆ. ವಚನ ಸಾಹಿತ್ಯ ಅಧ್ಯಯನ ಮಾಡುವವರಿಗೆ ಇವು ಬಹಳ ಅನುಕೂಲವಾಗಲಿದೆ’ ಎಂದು ಅಲ್ಲಮಪ್ರಭು ಸ್ವಾಮೀಜಿ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.