ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ಹೆಚ್ಚಿಸಿ’

Last Updated 14 ಡಿಸೆಂಬರ್ 2018, 16:38 IST
ಅಕ್ಷರ ಗಾತ್ರ

ಬೆಳಗಾವಿ: ವಾಲ್ಮೀಕಿ ನಾಯಕ ಸಮಾಜದವರಿಗೆ ಜನಸಂಖ್ಯೆಗೆ ಅನುಗುಣವಾಗಿ ಶೇ 7.5ರಷ್ಟು ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಿಕ ಸಾಮಾಜಿಕ ಪ್ರತಿಷ್ಠಾನ ಮಹಿಳಾ ಘಟಕದವರು ಶುಕ್ರವಾರ ತಾಲ್ಲೂಕಿನ ಸುವರ್ಣ ವಿಧಾನಸೌಧದ ಬಳಿಯ ಸುವರ್ಣ ಗಾರ್ಡನ್‌ನಲ್ಲಿ ಪ್ರತಿಭಟನೆ ನಡೆಸಿದರು.

‘ಪರಿಶಿಷ್ಟ ಪಂಗಡದವರಿಗೆ ಜನಸಂಖ್ಯೆಗೆ ತಕ್ಕಂತೆ ಮೀಸಲಾತಿ ನೀಡಬೇಕೆಂಬ ಸಂವಿಧಾನದ ಆಶಯ ಜಾರಿಗೊಳಿಸದೇ, ಹಿಂದುಳಿದ ಜಾತಿಗಳ ಪಟ್ಟಿಯಲ್ಲಿರುವ ಕೆಲವು ಜಾತಿಗಳನ್ನು ಒಂದಾದ ಮೇಲೆ ಒಂದರಂತೆ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ರಾಜ್ಯ ಸರ್ಕಾರವು ನಿರ್ಧಾರ ಕೈಗೊಂಡು ಶಿಫಾರಸು ಮಾಡಿತ್ತಿದೆ. ಇದು ವಾಲ್ಮೀಕಿ ನಾಯಕ ಸಮುದಾಯಕ್ಕೆ ತೀವ್ರ ಆಘಾತವನ್ನು ಉಂಟು ಮಾಡಿದೆ’ ಎಂದು ತಿಳಿಸಿದರು.

‘ದೊಡ್ಡ ಸಂಖ್ಯೆಯಲ್ಲಿರುವ ಸಮಾಜಕ್ಕೆ ಶೇ 3ರಷ್ಟು ಮೀಸಲಾತಿ ನೀಡಿರುವುದರಿಂದ ಅನ್ಯಾಯವಾಗಿದೆ. ಸಾಮಾಜಿಕ ನ್ಯಾಯ ದೊರೆಯದಂತಾಗಿದೆ’ ಎಂದು ಹೇಳಿದರು.

‘ಸರ್ಕಾರದಿಂದ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಸಮಿತಿಗಳಿಗೆ, ನಿಗಮ–ಮಂಡಳಿಗಳಿಗೆ ನಾಮಕರಣ ಮಾಡುವಾಗ ಪರಿಶಿಷ್ಟ ಪಂಗಡದವರಿಗೆ ಪ್ರತ್ಯೇಕ ಸದಸ್ಯತ್ವ ನೀಡಬೇಕು. ಪರಿಶಿಷ್ಟ ಪಂಗಡದ ಅಭಿವೃದ್ಧಿ ಖಾತೆ ಸೃಷ್ಟಿಸಿ, ಸಮಾಜಕ್ಕೆ ಸೇರಿದ ಶಾಸಕರೊಬ್ಬರಿಗೆ ಸಚಿವ ಸ್ಥಾನ ನೀಡಬೇಕು. ಪರಿಶಿಷ್ಟ ಪಂಗಡಕ್ಕೆ ಸೇರಿದ ಇಬ್ಬರಿಗೆ ಸಚಿವ ಸ್ಥಾನ ನೀಡಬೇಕು. ಬುಡಕಟ್ಟು ಲಕ್ಷಣಗಳನ್ನು ಹೊಂದಿಲ್ಲದ ಯಾವುದೇ ಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬಾರದು’ ಎಂದು ಆಗ್ರಹಿಸಿದರು.

ಅಧ್ಯಕ್ಷೆ ರೇಣುಕಾ ಕುಂಡೇದ, ಜಿಲ್ಲಾ ಘಟಕದ ಅಧ್ಯಕ್ಷೆ ಗಂಗವ್ವ ಬುಡ್ರಿ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT