ಮಂಗಳವಾರ, ಜುಲೈ 27, 2021
28 °C

ಸಿ.ಡಿ. ಪ್ರಕರಣ: ಯುವತಿ ಕುಟುಂಬ ಭೇಟಿಯಾದ ವಾಲ್ಮೀಕಿ ಶ್ರೀ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

pv photo

ಬೆಳಗಾವಿ: ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿರುದ್ಧದ ಸಿ.ಡಿ. ಪ್ರಕರಣದ ಯುವತಿಯ ಪೋಷಕರನ್ನು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಸೋಮವಾರ ರಾತ್ರಿ ಭೇಟಿಯಾಗಿ ಮಾತುಕತೆ ನಡೆಸಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ನೋವಿನಲ್ಲಿರುವ ಕುಟುಂಬದವರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದ್ದೇನೆ. ನಮ್ಮ ಸಮಾಜದ ಹೆಣ್ಣು ಮಗಳ ಕುಟುಂಬ ಧೈರ್ಯವಾಗಿ ಇರಬೇಕು. ಈ ಪ್ರಕರಣದಲ್ಲಿ ರಾಜಕೀಯ ಷಡ್ಯಂತ್ರವಾಗಿದ್ದು, ಸರಿಯಾಗಿ ತನಿಖೆ ಆಗಬೇಕು’ ಎಂದು ಒತ್ತಾಯಿಸಿದರು.

‘ಸಮಾಜದ ನಾಯಕರನ್ನು ತುಳಿಯುವ ಪ್ರಯತ್ನ ಮೊದಲಿನಿಂದಲೂ ನಡೆದಿದೆ. ಮಗಳು ಒತ್ತಡದಲ್ಲಿದ್ದಾಳೆ ಎಂದು ತಂದೆ- ತಾಯಿ ಹೇಳಿದ್ದಾರೆ. ನೊಂದಿರುವ ಈ ಕುಟುಂಬದ ಪರವಾಗಿ ಸಮಾಜ ಹಾಗೂ ಪೀಠ ಇರುತ್ತದೆ’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು