ಸೋಮವಾರ, ಜನವರಿ 25, 2021
26 °C

‘ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಡಬಿ: ‘ವಾಲ್ಮೀಕಿ ನಾಯಕ ಸಮಾಜಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು’ ಎಂದು ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಒತ್ತಾಯಿಸಿದರು.

ಸಮೀಪದ ಯರಝರ್ವಿ ಗ್ರಾಮದ ಗ್ರಾಮದೇವಿ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ, ರಾಜನಹಳ್ಳಿಯಲ್ಲಿ ನಡೆಯುವ 3ನೇ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

‘ನಿವೃತ್ತ ನ್ಯಾ.ನಾಗಮೋಹನದಾಸ್ ಆಯೋಗದ ವರದಿಯ ಶಿಫಾರಸಿನಂತೆ ನಾಯಕ ಸಮಾಜಕ್ಕೆ ಮೀಸಲಾತಿ ಒದಗಿಸಬೇಕು. ಆದರೆ, ರಾಜ್ಯ ಸರ್ಕಾರ ಇನ್ನೂ ಕ್ರಮ ಕೈಗೊಂಡಿಲ್ಲ. ನಮ್ಮ ಹಕ್ಕು ಪಡೆದುಕೊಳ್ಳಲು ಸಮಾಜದವರೆಲ್ಲರೂ ರಾಜನಹಳ್ಳಿಯಲ್ಲಿ ಫೆ. 8 ಹಾಗೂ 9ರಂದು ನಡೆಯುವ ಮಹರ್ಷಿ ವಾಲ್ಮೀಕಿ ಜಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿಗೆ ನೂತನವಾಗಿ ಆಯ್ಕೆಯಾದ ಸದಸ್ಯರನ್ನು ಸನ್ಮಾನಿಸಲಾಯಿತು.

ಇದಕ್ಕೂ ಮುನ್ನ, ಗ್ರಾಮದ ಪ್ರಮುಖ ಬೀದಿಗಳಲ್ಲಿ ಸ್ವಾಮೀಜಿ ಅವರನ್ನು ಸಂಭ್ರಮದಿಂದ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು. ವಾಲ್ಮೀಕಿ ವೃತ್ತದಲ್ಲಿರುವ ಮೂರ್ತಿಗೆ ಮಾಲಾರ್ಪಣೆ ಮಾಡಿದರು.

ಯರಗಟ್ಟಿ ತಾಲ್ಲೂಕು ವಾಲ್ಮೀಕಿ ಜಾತ್ರಾ ಸಮಿತಿ ಅಧ್ಯಕ್ಷ ಎಸ್.ಎಚ್. ನಾಯ್ಕರ, ಯರಝರ್ವಿ ಗ್ರಾಮದ ಹಿರಿಯರಾದ ಈರಣ್ಣ ಚಳಕೊಪ್ಪ, ಡಾ.ಎ.ಎಸ್.ಶಂಕರಲಿಂಗಪ್ಪ, ಬಸವರಾಜ ಮುತ್ತೆನ್ನವರ, ಸಿದ್ದಪ್ಪ ಮಾಳಗಿ, ಪರಶುರಾಮ ಸಿಂಗನ್ನವರ, ಫಕ್ಕೀರಪ್ಪ ಲಿಂಗರಡ್ಡಿ, ಸಿದ್ದಪ್ಪ ದಾಸಪ್ಪನವರ, ಪ್ರಕಾಶ, ಸದಾಶಿವ ದಾಸಪ್ಪನವರ, ಪ್ರಕಾಶ ಮುರಗೋಡ, ಯಲ್ಲಪ್ಪ ಮೇಟಗುಪ್ಪಿ, ರಾಘವೇಂದ್ರ ಪೂಜೇರಿ, ಶಂಕರ ದಳವಾಯಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು