ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ-ಪುಣೆ ಮಧ್ಯೆ ವಂದೇ ಭಾರತ್ ರೈಲು ಆರಂಭ: ಈರಣ್ಣ ಕಡಾಡಿ

Published 8 ಫೆಬ್ರುವರಿ 2024, 5:22 IST
Last Updated 8 ಫೆಬ್ರುವರಿ 2024, 5:22 IST
ಅಕ್ಷರ ಗಾತ್ರ

ಬೆಳಗಾವಿ: ‘ವಿದ್ಯುದ್ದೀಕರಣ ಕಾಮಗಾರಿ ಮುಗಿದ ನಂತರ, ಬೆಳಗಾವಿ-ಪುಣೆ ಮಧ್ಯೆ ವಂದೇ ಭಾರತ್ ರೈಲು ಸಂಚಾರ ಆರಂಭವಾಗಲಿದೆ’ ಎಂದು ಹುಬ್ಬಳ್ಳಿ ನೈರುತ್ಯ ರೈಲ್ವೆ ವಲಯದ ಪ್ರಯಾಣಿಕರ ಸಲಹಾ ಮಂಡಳಿ ಸದಸ್ಯರೂ ಆಗಿರುವ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಮಂಗಳವಾರ ಭೇಟಿ ಮಾಡಿದ ಅವರು, ‘ಈ ಮಾರ್ಗದಲ್ಲಿ ವಂದೇ ಭಾರತ್ ರೈಲಿನ ಅವಶ್ಯಕತೆಯಿದೆ ಎಂದು ಮನವರಿಕೆ ಮಾಡಿಕೊಟ್ಟಿದ್ದೇನೆ. ವಿದ್ಯುದ್ದೀಕರಣ ಕಾಮಗಾರಿ ಮುಗಿದ ನಂತರ, ವಂದೇ ಭಾರತ್ ರೈಲು ಸಂಚಾರ ಆರಂಭಿಸುವುದಾಗಿ ಅವರು ಲಿಖಿತವಾಗಿ ಮಾಹಿತಿ ನೀಡಿದ್ದಾರೆ’ ಎಂದು ತಿಳಿಸಿದ್ದಾರೆ.

ಜಿಲ್ಲೆಯ ರೈಲ್ವೆಗೆ ಸಂಬಂಧಿಸಿದ ವಿವಿಧ ವಿಷಯಗಳ ಮನವಿಗೆ ಸಚಿವರು ಸಕಾರಾತ್ಮವಾಗಿ ಸ್ಪಂದಿಸಿದರು. ಬೆಳಗಾವಿ ಕೋರ್ ಡೆವಲಪ್‍ಮೆಂಟ್‌ ಗ್ರೂಪ್ ಸದಸ್ಯರಾದ ಶೈಲೇಶ್ ಯಲಮಳ್ಳಿ, ಅಶ್ವಿನ್ ಪಾಟೀಲ, ಸಂದೀಪ ಪಾಟೀಲ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT