ಘಟಪ್ರಭಾ: ಪುಣೆ-ಹುಬ್ಬಳ್ಳಿ ವಂದೇ ಭಾರತ್ಎಕ್ಸ್ಪ್ರೆಸ್ ರೈಲು ಜನವರಿ 2 ರಿಂದ ಸ್ಥಳೀಯ ರೈಲು ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ ಎಂದು ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

‘ಈ ರೈಲು ಪುಣೆಯಿಂದ ಮಧ್ಯಾಹ್ನ 2.15ಕ್ಕೆ ಹೊರಟು ರಾತ್ರಿ 7.38ಕ್ಕೆ ಘಟಪ್ರಭಾಕ್ಕೆ ಆಗಮಿಸಲಿದೆ. ಈ ಸಂದರ್ಭದಲ್ಲಿ ನಿಲ್ದಾಣದಲ್ಲಿ ಸಂಜೆ 7 ಗಂಟೆಗೆ ಸ್ವಾಗತ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಇಲ್ಲಿಯ ನಾಗರಿಕರೆಲ್ಲರೂ ಭಾಗವಹಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

3ರಂದು ಹುಬ್ಬಳಿ ನಿಲ್ದಾಣದಿಂದ ಬೆಳಿಗ್ಗೆ 5.15ರಿಂದ ಹೊರಟು 7.23ಕ್ಕೆ ಇಲ್ಲಿಗೆ ಬರಲಿಲಿದೆ. ಈ ರೈಲು ವಾರದಲ್ಲಿ ಮೂರು ಬಾರಿ ಹುಬ್ಬಳ್ಳಿಯಿಂದ (ಬುಧವಾರ, ಶುಕ್ರವಾರ ಹಾಗೂ ಭಾನುವಾರ) ಮತ್ತು ಪುಣೆಯಿಂದ (ಗುರುವಾರ, ಶನಿವಾರ ಮತ್ತು ಸೋಮವಾರ) ಸಂಚರಿಸಲಿದ್ದು, ಘಟಪ್ರಭಾದಲ್ಲಿ ೨ ನಿಮಿಷ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ.

ಪ್ರಯಾಣಿಕರ ಸ್ಪಂದನೆ ಮತ್ತು ಜನದಟ್ಟಣೆ ಗಮನದಲ್ಲಿಟ್ಟುಕೊಂಡು ಮುಂದಿನ ದಿನಗಳಲ್ಲಿ ಪ್ರತಿದಿನ ಸಂಚರಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು. ಪ್ರಯಾಣಿಕರು ಈ ರೈಲು ಸೇವೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.