ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೋತ್ಸಾಹಧನ: ಅಂಗನವಾಡಿ ನೌಕರರ ಪ್ರತಿಭಟನೆ

Last Updated 3 ಜುಲೈ 2020, 14:15 IST
ಅಕ್ಷರ ಗಾತ್ರ

ಬೆಳಗಾವಿ: ‘ಕೊರೊನಾ ಸೋಂಕಿನ ಜಾಗೃತಿ ಕಾರ್ಯದಲ್ಲಿ ತೊಡಗಿರುವ ತಮಗೂ ₹ 5ಸಾವಿರ ಪ್ರೋತ್ಸಾಹಧನ ನೀಡಬೇಕು’ ಎನ್ನುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

‘ಗ್ರಾಮೀಣ ನೌಕರರಿಗೆ ಈ ತಿಂಗಳ ಗೌರವಧನವನ್ನು ಕೂಡಲೇ ನೀಡಬೇಕು. ಮೇಲ್ವಿಚಾರಕಿಯರು ಪ್ರತಿ ತಿಂಗಳು ಹಿಂಬಾಕಿ ಹಣದಲ್ಲಿ ₹ 1000ದಿಂದ ₹ 3ಸಾವಿರ ವಸೂಲಿ ಮಾಡುತ್ತಿದ್ದಾರೆ. ಇದರಿಂದ ಬಹಳ ಅನ್ಯಾಯವಾಗುತ್ತಿದ್ದು, ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು’ ಎಂದು ಒತ್ತಾಯಿಸಿದರು.

‘ಗೌರವಧನ, ಕೇಂದ್ರಗಳ ಬಾಡಿಗೆ ಹಣ ಹಾಗೂ ಅಡುಗೆ ಅನಿಲ ಸಿಲಿಂಡರ್‌ ಖರೀದಿ ಅನುದಾನವನ್ನು ಪ್ರತಿ ತಿಂಗಳ 5ನೇ ತಾರೀಖಿನ ಒಳಗೆ ಕೊಡಬೇಕು. ಕಾರ್ಯಕರ್ತೆಯರಿಗೆ ಗೋವಾ ಮಾದರಿಯಲ್ಲಿ ₹ 18ಸಾವಿರ ಗೌರವಧನ ನೀಡಬೇಕು’ ಎಂದು ಆಗ್ರಹಿಸಿದರು.

ಅಧ್ಯಕ್ಷ ನಾಗೇಶ ಎಂ. ಸಾತೇರಿ, ಉಪಾಧ್ಯಕ್ಷರಾದ ಯಲ್ಲೂಭಾಯಿ ಶೀಗಿಹಳ್ಳಿ, ಮೀನಾಕ್ಷಿ ಕೋಟಗಿ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT