ಗುರುವಾರ , ಜೂನ್ 24, 2021
28 °C

ಬೆಳಗಾವಿ: ತರಕಾರಿ, ಹಣ್ಣು, ಹೂ ಮಾರಾಟಕ್ಕೆ ವ್ಯವಸ್ಥೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಕೋವಿಡ್ ಲಾಕ್‌ಡೌನ್‌ ಜಾರಿಯಲ್ಲಿರುವುದರಿಂದ ನಗರದ ಎಲ್ಲ ವಾರ್ಡ್‍ಗಳಲ್ಲೂ ತರಕಾರಿ, ಹಣ್ಣು, ಹೂವು ಮಾರಾಟಕ್ಕೆ ತೋಟಗಾರಿಕೆ ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಜಿಲ್ಲಾ ಹಾಪ್‍ಕಾಮ್ಸ್, ರೈತ ಉತ್ಪಾದಕ ಸಂಸ್ಥೆ ಹಾಗೂ ರಫ್ತುದಾರರಿಂದ ವ್ಯವಸ್ಥೆ ಮಾಡಲಾಗುತ್ತಿದೆ. ಪ್ರತಿ ವಾರ್ಡ್‌ನಲ್ಲೂ ಸಂಚರಿಸಲು ಅನುಕೂಲ ಕಲ್ಪಿಸಲಾಗಿದೆ’ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ರವೀಂದ್ರ ಹಕಾಟಿ ತಿಳಿಸಿದ್ದಾರೆ.

‘ವಾರ್ಡ್‌ವಾರು ನೋಡಲ್ ಅಧಿಕಾರಿಗಳನ್ನು ನೇಮಿಸಿದ್ದು, ತರಕಾರಿ ವಾಹನ ವ್ಯವಸ್ಥೆಯನ್ನು ನೋಡಿಕೊಳ್ಳುತ್ತಾರೆ. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್‌ ಧರಿಸಿ ಮತ್ತು ಅಂತರ ಕಾಪಾಡಿಕೊಂಡು ಖರೀದಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಕಿರಣಕುಮಾರ ಉಪಳೆ ಮೊ: 9886909153 (ವಾರ್ಡ್ ನಂ.1–12), ಲಕ್ಷ್ಮಣ ಯಡ್ರಾಂವಿ ಮೊ: 9980065304 (ವಾರ್ಡ್‌ ನಂ. 13-24), ಬಸನಗೌಡ ಬಿ. ಪಾಟೀಲ ಮೊ: 9480343791 (ವಾರ್ಡ್ ನಂ. 25-36), ಈರಣ್ಣ ಬಟಕುರ್ಕಿ ಮೊ: 9880085009 (ವಾರ್ಡ್‌ ನಂ. 37-48) ಹಾಗೂ ರವಿ ಭಜಂತ್ರಿ ಮೊ: 9972616609 (ವಾರ್ಡ್‌ ನಂ. 49-58) ಸಂಪರ್ಕಿಸಬಹುದು’ ಎಂದು ಮಾಹಿತಿ ನೀಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು