ಮೂಡಲಗಿ: ಮೂಡಲಗಿ ಪಟ್ಟಣದ ವೇಮನ್ ಕೋ-ಆಪ್ ಕ್ರೆಡಿಟ್ ಸೋಸೈಟಿಯ ಎರಡು ಶಾಖೆಗಳು ಫೆ.14 ರಂದು ಜೆಲ್ಲೆಯ ಯರಗಟ್ಟಿ ಮತ್ತು ಸವದತ್ತಿ ಪಟ್ಟಣಗಳಲ್ಲಿ ಮಹಾಲಕ್ಷ್ಮೀ ಹಾಗೂ ಮಹಾಸರಸ್ವತಿ ಪೂಜೆಯೊಂದಿಗೆ ಜರುಗಲಿದೆ ಎಂದು ಸೊಸೈಟಿ ಅಧ್ಯಕ್ಷ ಸಂತೋಷ ಸೋನವಾಲಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೆ.14 ರಂದು ಬೆಳಿಗ್ಗೆ 9.30ಕ್ಕೆ ಯರಗಟ್ಟಿ ಪಟ್ಟಣದ ಜಕಾತಿ ಕಟ್ಟಡದಲ್ಲಿ ಹಾಗೂ ಸವದತ್ತಿ ಪಟ್ಟಣದಲ್ಲಿ ಬೆಳಿಗ್ಗೆ 10.30ಕ್ಕೆ ಹಂಪಣ್ಣವರ ಕಟ್ಟಡದಲ್ಲಿ ಜರುಗುವ ಸಮಾರಂಭದ ಸಾನ್ನಿಧ್ಯವನ್ನು ಮೂಡಲಗಿಯ ದತ್ತಾತ್ರಯಬೋಧ ಸ್ವಾಮೀಜಿ, ಶ್ರೀಧರಬೋಧ ಸ್ವಾಮೀಜಿ, ಎರೆಹೊಸಹಳ್ಳಿಯ ರಡ್ಡಿ ಗುರುಪೀಠದ ಪೀಠಾಧಿಪತಿ ವೇಮನಾನಂದ ಸ್ವಾಮೀಜಿ, ಸುಣಧೋಳಿಯ ಶಿವಾನಂದ ಸ್ವಾಮೀಜಿ ವಹಿಸುವರು.

ಮುಖ್ಯ ಅತಿಥಿಗಳಾಗಿ ಡಾ.ಗೀರಿಶ ಸೋನವಾಲಕರ ಮತ್ತಿತರರು ಭಾಗವಹಿಸುವರು ಎಂದು ತಿಳಿಸಿದ್ದಾರೆ.

Cut-off box - ‘ಮಹಿಳಾ ಉದ್ಯೋಗಕ್ಕೆ ಆದ್ಯತೆ’ ಚಿಕ್ಕೋಡಿ: ‘ಪ್ರದಾನ ಮಂತ್ರಿ ಮೋದಿ ಅವರ ನೇತೃತ್ವದಲ್ಲಿ ‘ನಾರಿಶಕ್ತಿ ವಂದನ’ ಕಾರ್ಯಕ್ರಮ ಮೂಲಕ ಮಹಿಳೆಯರಿಗೆ ಸ್ವ ಉದ್ಯೋಗ ಕೈಗೊಳ್ಳಲು ಸಹಕಾರಿಯಾಗಿದೆ’ ಎಂದು ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು. ತಾಲ್ಲೂಕಿನ ಯಕ್ಸಂಬಾ ಪಟ್ಟಣದ ಬೀರೇಶ್ವರ ಭವನದಲ್ಲಿ ಚಿಕ್ಕೋಡಿ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ನಡೆದ ಶಕ್ತಿ ವಂದನ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ‘ಮಹಿಳೆಯರ ಸಬಲೀಕರಣಕ್ಕಾಗಿ ತಂದಿರುವ ನಾರಿ ಶಕ್ತಿ ಯೋಜನೆಯನ್ನು ಗ್ರಾಮದ ಪ್ರತಿಯೊಬ್ಬ ಮಹಿಳೆಗೆ ಮುಟ್ಟಿಸುವ ಹೊಣೆಗಾರಿಕೆ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರ ಜವಾಬ್ದಾರಿಯಾಗಿದೆ’ ಎಂದರು. ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ ‘ಕಳೆದ 10 ವರ್ಷಗಳಲ್ಲಿ ಮೋದಿ ಅವರು ಹಲವಾರು ಯೋಜನೆಗಳನ್ನು ಜಾರಿಗೆ ತಂದು ಆರ್ಥಿಕ ಅಭಿವೃದ್ಧಿಗೆ ಕಾರಣವಾಗಿದ್ದಾರೆ’ ಎಂದರು. ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ ಅಪ್ಪಾಜಿಗೋಳ ನಿಂಗಪ್ಪ ಕೋಕಲೆ ಮುಂತಾದವರು ಮಾತನಾಡಿದರು. ಅಮೃತ ಕುಲಕರ್ಣಿ ಸಂಜಯ ಪಾಟೀಲ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.