ಗುರುವಾರ , ಅಕ್ಟೋಬರ್ 1, 2020
21 °C

ಬೆಳಗಾವಿ | ಬೆಂಗಳೂರು ಗಲಭೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರಿನ ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಹಾಗೂ ಕಾವಲ್‌ಭೈರಸಂದ್ರದಲ್ಲಿ ನಡೆದ ಗಲಭೆ ಖಂಡಿಸಿ ವಿಶ್ವ ಹಿಂದೂ ಪರಿಷತ್‌–ಬಜರಂಗ ದಳ ಕಾರ್ಯಕರ್ತರು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟಿಸಿದರು

ಬೆಳಗಾವಿ: ಬೆಂಗಳೂರಿನ ಡಿ.ಜೆ. ಹಳ್ಳಿ, ಕೆ.ಜಿ. ಹಳ್ಳಿ ಮತ್ತು ಕಾವಲ್‌ಭೈರಸಂದ್ರದಲ್ಲಿ ನಡೆದ ಗಲಭೆ ಖಂಡಿಸಿ ವಿಶ್ವ ಹಿಂದೂ ಪರಿಷತ್‌–ಬಜರಂಗ ದಳ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟಿಸಿದರು.

‘ಕಿಡಿಗೇಡಿಗಳು ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ್ದಾರೆ. ಅಮಾಯಕರಿಗೆ ತೊಂದರೆ ಕೊಟ್ಟಿದ್ದಾರೆ. ಪೊಲೀಸ್ ಠಾಣೆ ಹಾಗೂ ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಇದು ಪೂರ್ವಯೋಜಿತ ಹಾಗೂ ಅತ್ಯಂತ ವ್ಯವಸ್ಥಿತವಾಗಿ ನಡೆದ ಘಟನೆಯಾಗಿದೆ. ಇದರಿಂದ ಸಮಾಜಕ್ಕೆ ಅಪಾರ ನಷ್ಟವಾಗಿದೆ. ಘಟನೆಗೆ ಕಾರಣವಾದ ಸಂಘಟನೆಗಳನ್ನು ಕೂಡಲೇ ನಿಷೇಧಿಸಬೇಕು’ ಎಂದು ಒತ್ತಾಯಿಸಿದರು.

‘ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ನೋಡಿಕೊಳ್ಳಬೇಕು. ಗಲಭೆ ನಿಯಂತ್ರಿಸುವಲ್ಲಿ ನಡೆಸಿದ ಪೊಲೀಸ್ ಕಾರ್ಯಾಚರಣೆ ಸಮರ್ಥಿಸಿಕೊಳ್ಳಬೇಕು. ಗಲಭೆಯಲ್ಲಿ ಪಾಲ್ಗೊಂಡು ಪೊಲೀಸರಿಂದ ಹತ್ಯೆಯಾದ ಯಾರಿಗೂ ಪರಿಹಾರ ಕೊಡಬಾರದು. ಸಂತ್ರಸ್ತರಾಗಿರುವ ಅಮಾಯಕ ಹಿಂದೂಗಳಿಗೆ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದರು.

‘ಕರ್ತವ್ಯನಿರತ ಪೊಲೀಸರಿಗೆ ಸರ್ಕಾರ ಬೆಂಬಲವಾಗಿ ನಿಲ್ಲಬೇಕು. ಇಡೀ ಘಟನೆಯನ್ನು ಎನ್‌ಐಎ ತನಿಖೆಗೆ ಒಳಪಡಿಸಬೇಕು’ ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ಶ್ರೀಕಾಂತ ಕದಂ, ಕೃಷ್ಣ ಭಟ್, ಬಸವರಾಜ ಗಾಣಗಿ, ಆನಂದ, ಆದಿನಾಥ ಗಾವಡೆ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು