‘ಡ್ರಗ್ಸ್ ಜಾಲ: ಶಿಸ್ತು ಕ್ರಮ ಜರುಗಿಸಿ’

ಬೆಳಗಾವಿ: ‘ಡ್ರಗ್ಸ್ ಜಾಲದಲ್ಲಿ ತೊಡಗಿದವರನ್ನು ತಕ್ಷಣ ಬಂಧಿಸಿ ಶಿಸ್ತು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
‘ರಾಜ್ಯದಾದ್ಯಂತ ಡ್ರಗ್ಸ್ ಜಾಲ ವ್ಯಾಪಿಸಿದೆ. ವಿದ್ಯಾಭ್ಯಾಸ ಮಾಡಬೇಕಾದ ವಯಸ್ಸಿನಲ್ಲಿ ಯುವ ಜನರು ದುಶ್ಚಟಕ್ಕೆ ಬಲಿಯಾಗುತ್ತಿದ್ದಾರೆ. ಈ ಮಾಫಿಯಾ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು’ ಎಂದು ಒತ್ತಾಯಿಸಿದರು.
ವೈ.ಆರ್. ಚವಾಣ, ಎಂ.ಎನ್. ಗಾಜಿಕರ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.