ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪರಾಷ್ಟ್ರಪತಿ, ರಾಜ್ಯಪಾಲ ಬೆಳಗಾವಿಗೆ ಇಂದು

Published 26 ಮೇ 2024, 16:27 IST
Last Updated 26 ಮೇ 2024, 16:27 IST
ಅಕ್ಷರ ಗಾತ್ರ

ಬೆಳಗಾವಿ: ಉಪರಾಷ್ಟ್ರಪತಿ ಜಗದೀಪ್‌ ಧನಕರ್‌, ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರು ಮೇ 27ರಂದು ನಗರಕ್ಕೆ ಭೇಟಿ ನೀಡಲಿದ್ದಾರೆ.

ಅಂದು ಬೆಳಿಗ್ಗೆ 10ಕ್ಕೆ ಇಂಡಿಯನ್‌ ಕೌನ್ಸಿಲ್‌ ಆಫ್‌ ಮೆಡಿಕಲ್‌ ರಿಸರ್ಚ್‌–ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟ್ರೇಡಿಷನಲ್‌ ಮೆಡಿಸಿನ್‌(ಐಸಿಎಂಆರ್‌–ಎನ್‌ಐಟಿಎಂ)ನಲ್ಲಿ ನಡೆಯಲಿರುವ 18ನೇ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

11.30ಕ್ಕೆ ಕೆಎಲ್‌ಇ ಅಕಾಡೆಮಿ ಆಫ್‌ ಹೈಯರ್‌ ಎಜ್ಯುಕೇಷನ್‌ ಆ್ಯಂಡ್‌ ರಿಸರ್ಚ್‌(ಕಾಹೇರ್‌)ನಲ್ಲಿ ನಡೆಯಲಿರುವ 14ನೇ ಘಟಿಕೋತ್ಸವದಲ್ಲಿ ಜಯದೀಪ್‌ ಧನಕರ್‌ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಥಾವರಚಂದ್‌ ಗೆಹಲೋತ್‌ ಘಟಿಕೋತ್ಸವ ಭಾಷಣ ಮಾಡುವರು. ಇಲ್ಲಿಂದ ಬೆಂಗಳೂರಿಗೆ ತೆರಳುವರು.

‘ಉಪರಾಷ್ಟ್ರಪತಿ, ರಾಜ್ಯಪಾಲರ ಭೇಟಿ ಹಿನ್ನೆಲೆಯಲ್ಲಿ ನಗರಾದ್ಯಂತ ಬಿಗಿ ಭದ್ರತೆ ಕೈಗೊಂಡಿದ್ದೇವೆ. ಸಾಂಬ್ರಾ ವಿಮಾನ ನಿಲ್ದಾಣ, ಅವರು ಸಂಚರಿಸುವ ಮಾರ್ಗ ಹಾಗೂ ಪಾಲ್ಗೊಳ್ಳಲಿರುವ ಕಾರ್ಯಕ್ರಮದ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿದ್ದೇವೆ’ ಎಂದು ನಗರ ಪೊಲೀಸ್‌ ಕಮಿಷನರ್‌ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌ ತಿಳಿಸಿದ್ದಾರೆ.

ಉಪರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ಬೆಳಗಾವಿಯ ಇಂಡಿಯನ್‌ ಕೌನ್ಸಿಲ್‌ ಆಫ್‌ ಮೆಡಿಕಲ್‌ ರಿಸರ್ಚ್‌–ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟ್ರೇಡಿಷನಲ್‌ ಮೆಡಿಸಿನ್‌ ಬಳಿ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಯಿತು
ಉಪರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ಬೆಳಗಾವಿಯ ಇಂಡಿಯನ್‌ ಕೌನ್ಸಿಲ್‌ ಆಫ್‌ ಮೆಡಿಕಲ್‌ ರಿಸರ್ಚ್‌–ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟ್ರೇಡಿಷನಲ್‌ ಮೆಡಿಸಿನ್‌ ಬಳಿ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT