ಸೋಮವಾರ, ಡಿಸೆಂಬರ್ 6, 2021
23 °C

ವಿಧಾನಪರಿಷತ್‌ ಚುನಾವಣೆ: 9 ನಾಮಪತ್ರಗಳು ಕ್ರಮಬದ್ಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ನ ದ್ವಿಸದಸ್ಯ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಅಭ್ಯರ್ಥಿಗಳಿಂದ ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನೆ ಕಾರ್ಯ ಬುಧವಾರ ನಡೆಯಿತು. 9 ಮಂದಿಯ ನಾಮಪತ್ರಗಳು ಕ್ರಮಬದ್ಧವಾಗಿವೆ.

ಬಿಜೆಪಿಯ ಮಹಾಂತೇಶ ಕವಟಗಿಮಠ, ಕಾಂಗ್ರೆಸ್‌ನ ಚನ್ನರಾಜ ಹಟ್ಟಿಹೊಳಿ, ಆಮ್ ಆದ್ಮಿ ಪಕ್ಷದ ಶಂಕರ ಹೆಗಡೆ, ಪಕ್ಷೇತರರಾದ ಅಶೋಕ ಹಣಜಿ, ಕಲ್ಮೇಶ ಗಾಣಗಿ, ಜಗದೀಶ ಕವಟಗಿಮಠ, ಲಖನ್ ಜಾರಕಿಹೊಳಿ, ಶಂಕರ ಕುಡಸೋಮನ್ನವರ ಹಾಗೂ ಸಂಗಮೇಶ ಚಿಕ್ಕನರಗುಂದ ಅವರ ನಾಮಪತ್ರಗಳು ಕ್ರಮಬದ್ಧವಾಗಿವೆ. ಪಕ್ಷೇತರ ಅಭ್ಯರ್ಥಿ ನಾಗಪ್ಪ ಕಳಸನ್ನವರ ಅವರ ನಾಮಪತ್ರ ತಿರಸ್ಕೃತಿಗೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆರ್. ವೆಂಕಟೇಶಕುಮಾರ್‌ ತಿಳಿಸಿದ್ದಾರೆ.

ನಾಮಪತ್ರ ವಾಪಸ್ ಪಡೆಯಲು ನ. 26 ಕೊನೆಯ ದಿನವಾಗಿದೆ. ಡಿ. 10ರಂದು ಮತದಾನ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು