ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ನಾಮಪತ್ರ ಸಲ್ಲಿಕೆ

Last Updated 23 ನವೆಂಬರ್ 2021, 6:17 IST
ಅಕ್ಷರ ಗಾತ್ರ

ಬೆಳಗಾವಿ: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಚನ್ನರಾಜ ಹಟ್ಟಿಹೊಳಿ ಜಿಲ್ಲಾ ಚುನಾವಣಾಧಿಕಾರಿ ಆರ್. ವೆಂಕಟೇಶ ಕುಮಾರ್ ಅವರಿಗೆ ಮಂಗಳವಾರ ನಾಮಪತ್ರ ಸಲ್ಲಿಸಿದರು.

ಅವರ ಸಹೋದರಿ, ಶಾಸಕಿಯೂ ಆಗಿರುವ ಲಕ್ಷ್ಮಿ ಹೆಬ್ಬಾಳಕರ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಮುಖಂಡ ಎ.ಬಿ. ಪಾಟೀಲ, ಖಾನಾಪುರ ‌ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಜೊತೆಗಿದ್ದರು.

ಇದಕ್ಕೂ ಮುನ್ನ ಚನ್ನರಾಜ, ತಾಲ್ಲೂಕಿನ ಸುಳೆಭಾವಿ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಕುಟುಂಬದೊಂದಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಬಿ ಫಾರಂ ಅನ್ನು ಮೂರ್ತಿ ಮುಂದಿಟ್ಟು ಪೂಜೆ ನೆರವೇರಿಸಲಾಯಿತು.

ಸಿಪಿಇಡಿ ಕಾಲೇಜು ಮೈದಾನದಲ್ಲಿ ಕಾರ್ಯಕರ್ತರು ಸೇರುತ್ತಿದ್ದಾರೆ. ಅಲ್ಲಿ ಪ್ರಚಾರ ಸಭೆ ನಡೆಸಿ ಅಲ್ಲಿಂದ ಮೆರವಣಿಗೆಯಲ್ಲಿ ಬಂದು ಮತ್ತೊಂದು ಸೆಟ್ ನಾಮಪತ್ರ ಸಲ್ಲಿಸಲು ಅವರು ತಯಾರಿ ಮಾಡಿಕೊಂಡಿದ್ದಾರೆ.

ಬಿಜೆಪಿ ಅಭ್ಯರ್ಥಿಯಾಗಿ ಮಹಾಂತೇಶ ಕವಟಗಿಮಠ ನಾಮಪತ್ರ ಸಲ್ಲಿಸಲಿದ್ದು, ಆ ಪಕ್ಷದ ನಾಯಕರು ಕನ್ನಡ ಸಾಹಿತ್ಯ ಭವನದ ಆವರಣದಲ್ಲಿ ಸೇರುತ್ತಿದ್ದಾರೆ.

ಇನ್ನೊಂದೆಡೆ, ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಕಣಕ್ಕಿಳಿಯಲಿದ್ದಾರೆ. ಚನ್ನಮ್ಮ ವೃತ್ತದಲ್ಲಿರುವ ಗಣೇಶ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಸರ್ದಾರ್ ಮೈದಾನದಿಂದ ಮೆರವಣಿಗೆಯಲ್ಲಿ ತೆರಳಿ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಅಲ್ಲಿ
ಈಗಾಗಲೇ ಗೋಕಾಕ ಭಾಗದ ನೂರಾರು ಜನರು ಸೇರಿಸಿದ್ದಾರೆ. ಲಖನ್ ಅವರಿಗೆ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಪುತ್ರರೂ ಆಗಿರುವ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಸಾಥ್ ನೀಡಿದ್ದಾರೆ.

ಮೂವರೂ ಅಭ್ಯರ್ಥಿಗಳು ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ನೂರಾರು ಮಂದಿಯೊಂದಿಗೆ ಮೆರವಣಿಗೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT