ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಪರಿಷತ್ ಚುನಾವಣೆ: ಅಧಿಸೂಚನೆ ಪ್ರಕಟ

Last Updated 19 ಮೇ 2022, 8:56 IST
ಅಕ್ಷರ ಗಾತ್ರ

ಬೆಳಗಾವಿ: ಕರ್ನಾಟಕ ವಾಯವ್ಯ ಪಧವೀಧರು ಮತ್ತು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನಪರಿಷತ್ತಿಗೆ ತಲಾ ಒಬ್ಬ ಸದಸ್ಯರನ್ನು ಚುನಾಯಿಸಲು ಪ್ರಾದೇಶಿಕ ಆಯುಕ್ತರು ಹಾಗೂ ಚುನಾವಣಾಧಿಕಾರಿಯಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರು ಗುರುವಾರ ಅಧಿಸೂಚನೆ ಹೊರಡಿಸಿದ್ದಾರೆ.

ನಾಮಪತ್ರಗಳನ್ನು ಉಮೇದುವಾರರು ಅಥವಾ ಅವರ ಸೂಚಕರು ಚುನಾವಣಾಧಿಕಾರಿ ಕಚೇರಿ ಅಥವಾ ಸಹಾಯಕ ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ಮೇ 26ರೊಳಗೆ ಬೆಳಿಗ್ಗೆ 11ರಿಂದ ಮಧ್ಯಾಹ್ನ 3ರವರೆಗೆ (ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ) ಸಲ್ಲಿಸಬಹುದು ಎಂದು ತಿಳಿಸಲಾಗಿದೆ.

ನಾಮಪತ್ರದ ನಮೂನೆಗಳನ್ನು ಚುನಾವಣಾಧಿಕಾರಿ ಕಚೇರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಕಾರ್ಯಾಲಯದಲ್ಲಿ ಕಚೇರಿ ವೇಳೆಯಲ್ಲಿ ಪಡೆದುಕೊಳ್ಳಬಹುದಾಗಿದೆ. ಸಲ್ಲಿಕೆಯಾದ ನಾಮಪತ್ರಗಳನ್ನು ಬೆಳಗಾವಿಯ ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಮೇ 27ರಂದು ಬೆಳಿಗ್ಗೆ 11ಕ್ಕೆ ಪರಿಶೀಲನೆಗೆ ತೆಗೆದುಕೊಳ್ಳಲಾಗುವುದು. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವ ತಿಳಿವಳಿಕೆ ಪತ್ರವನ್ನು ಉಮೇದುವಾರ ಅಥವಾ ಅವರ ಯಾರೇ ಸೂಚಕರು ಅಥವಾ ಅದನ್ನು ಸಲ್ಲಿಸಲು ಉಮೇದುವಾರನಿಂದ ಲಿಖಿತವಾಗಿ ಅಧಿಕೃತವಾದ ಚುನಾವಣಾ ಏಜೆಂಟರು ಕಚೇರಿಗಳಿಗೆ ಮೇ.30ರಂದು ಮಧ್ಯಾಹ್ನ 3ರಒಳಗೆ ಸಲ್ಲಿಸಬೇಕು.

ಅವಶ್ಯವಿದ್ದಲ್ಲಿ ಜೂನ್ 13ರಂದು ಬೆಳಿಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT