ಭಾನುವಾರ, ಜುಲೈ 3, 2022
27 °C

ಲಕ್ಷ್ಮಿ ಹೆಬ್ಬಾಳಕರ ಹೆಸರು ಹೇಳುತ್ತಿದ್ದಂತೆಯೇ ‘ಥೂ... ಥೂ...’ ಎಂದು ಉಗಿದ ರಮೇಶ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಗೋಕಾಕದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು, ಕಾಂಗ್ರೆಸ್‌ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹೆಸರೇಳುತ್ತಿದ್ದಂತೆಯೇ ‘ಥೂ... ಥೂ...’ ಎಂದು ಪ್ರತಿಕ್ರಿಯಿಸಿದರು.

ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ನಾಮಪತ್ರ ಸಲ್ಲಿಕೆಗೆ ಬಂದಿದ್ದ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಈ ಚುನಾವಣೆ ರಮೇಶ್ ಜಾರಕಿಹೊಳಿ ವರ್ಸಸ್ ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಹಣಾಹಣಿಯಾ?’ಎನ್ನುವ ಪ್ರಶ್ನೆಗೆ ಸಿಡಿಮಿಡಿಯಾಗಿ ‘ಥೂ ಥೂ’ ಎಂದು ಹೇಳಿ ಹೊರಟರು.

ಇದನ್ನೂ ಓದಿ... ಶಂಖ ಊದಲು ಎಲ್ಲಾ ಕಡೆ ನಾನೇ ಹೋಗಬೇಕು, ನನಗೆ ಸಮಯವಿಲ್ಲ: ಕುಮಾರಸ್ವಾಮಿ

ಇದಕ್ಕೂ ಮುನ್ನ, ‘ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮೊದಲ ಪ್ರಾಶಸ್ತ್ಯ ಮತದಲ್ಲಿ ಗೆಲವು ಸಾಧಿಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸೋಲಿಸುವುದೊಂದೆ ನಮ್ಮ ಗುರಿ’ಎಂದು ಹೇಳಿದರು.

‘ಕಾಂಗ್ರೆಸ್‌ ಅಭ್ಯರ್ಥಿ ಸೋಲಿಸುವುದಕ್ಕಾಗಿ 2ನೇ ಅಭ್ಯರ್ಥಿಗೆ ಬೆಂಬಲ ನೀಡುವುದಕ್ಕೆ ಸಂಬಂಧಿಸಿದಂತೆ, ನ.29ರಂದು ದೆಹಲಿಗೆ ಹೋಗಿ ವರಿಷ್ಠರನ್ನು ಒಪ್ಪಿಸುವ ಕೆಲಸವನ್ನು ಮಾಡುತ್ತೇನೆ. ಮೊದಲ ಪ್ರಾಶಸ್ತ್ಯ ಮತದಲ್ಲಿ ಬಿಜೆಪಿ ಅಭ್ಯರ್ಥಿ ಗೆಲವು ಸಾಧಿಸಬೇಕು. ‌2ನೇ ಪ್ರಾಶಸ್ತ್ಯದ ಮತದಲ್ಲಿ ಕಾಂಗ್ರೆಸ್ ಸೋಲಿಸಬೇಕು ಎಂದು ಪ್ರಚಾರ ಮಾಡುತ್ತಿದ್ದೇನೆ’ ಎಂದರು.

ಇದನ್ನೂ ಓದಿ... ಸ್ಥಾನಮಾನದ ಭರವಸೆ ಸಿಕ್ಕರೆ ಲಖನ್‌ ಹಿಂದೆ ಸರಿಯಲೂಬಹುದು: ಸತೀಶ ಜಾರಕಿಹೊಳಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು