ಶನಿವಾರ, ನವೆಂಬರ್ 28, 2020
25 °C

15 ಲಕ್ಷ ಸೀರೆ ಖರೀದಿಸಲು ನೇಕಾರರ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ನೇಕಾರರು ಸಿದ್ಧಪಡಿಸಿರುವ 15 ಲಕ್ಷ ಸೀರೆಗಳನ್ನು ಸರ್ಕಾರದಿಂದಲೇ ಖರೀದಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನೇಕಾರರ ವೇದಿಕೆ ಜಿಲ್ಲಾ ಘಟಕದವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

‘ಕೋವಿಡ್ ಲಾಕ್‌ಡೌನ್‌ನಿಂದಾಗಿ ಸೀರೆಗಳ ಮಾರಾಟವಾಗದೆ ನಾವು ಸಂಕಷ್ಟಕ್ಕೆ ಒಳಗಾಗಿದ್ದೇವೆ. ನೇಕಾರರಿಂದ ಸೀರೆಗಳನ್ನು ಖರೀದಿಸಲಾಗುವುದು ಎಂದು ಸರ್ಕಾರವೇ ಹೇಳಿತ್ತು. ಆದರಂತೆ ತಕ್ಷಣದಿಂದಲೇ ಕಾರ್ಯಪ್ರವೃತ್ತರಾಗಬೇಕು’ ಎಂದು ಒತ್ತಾಯಿಸಿದರು.

ಮುಖಂಡ ಪರಶುರಾಮ ಢಗೆ ಮಾತನಾಡಿ, ‘ಜಿಲ್ಲೆಯೊಂದರಲ್ಲೇ ನೇಕಾರರು ಉತ್ಪಾದಿಸಿರುವ 15 ಲಕ್ಷ ಸೀರೆಗಳು ಮಾರಾಟವಾಗದೆ ಉಳಿದಿವೆ. ಸ್ವತಃ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಭರವಸೆ ನೀಡಿದ್ದರೂ ಸ್ಪಂದನೆ ದೊರೆತಿಲ್ಲದಿರುವುದು ವಿಷಾದನೀಯ. ಜವಳಿ ಇಲಾಖೆ ತಪ್ಪು ಮಾಹಿತಿ ನೀಡಿದ ಕಾರಣ ಸೀರೆಗಳನ್ನು ಖರೀದಿಸಲಾಗುತ್ತಿಲ್ಲ ಎನ್ನಲಾಗುತ್ತಿದೆ. ಏನೇ ಸಮಸ್ಯೆಗಳಿದ್ದರೂ ಸರ್ಕಾರ ಬಗೆಹರಿಸಿ, ನೇಕಾರರಿಗೆ ಸಹಾಯಹಸ್ತ ಚಾಚಬೇಕು’ ಎಂದು ಕೋರಿದರು.

ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಪಾಂಡುರಂಗ ಧೋತ್ರೆ, ಮುಖಂಡರಾದ ರಮೇಶ ಸೋಂಟಕ್ಕಿ, ಶ್ರೀನಿವಾಸ ತಾಳೂಕರ, ನಾರಾಯಣ ಕಾಮಕರ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.