ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಒಂದು ಮತಕ್ಕೆ ₹10 ಸಾವಿರ ಹಂಚಿಕೆ: ಆರೋಪ

Last Updated 13 ಜೂನ್ 2022, 20:00 IST
ಅಕ್ಷರ ಗಾತ್ರ

ಬೆಳಗಾವಿ: ‘ವಿಧಾನ ಪರಿಷತ್‌ ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಕಾಂಗ್ರೆಸ್‌ ವಾಮಮಾರ್ಗ ಅನುಸರಿಸುತ್ತಿದೆ. ಶಿಕ್ಷಕರಿಗೆ ಒಂದು ಮತಕ್ಕೆ ₹10 ಸಾವಿರ ಹಣ ಹಂಚಿದೆ‘ ಎಂದು ಬಿಜೆಪಿ ಶಾಸಕ ಅನಿಲ ಬೆನಕೆ ಆಪಾದಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ಬಿಜೆಪಿ ಅಭ್ಯರ್ಥಿ ಅರುಣ ಶಹಾಪುರ 12 ವರ್ಷ ವಿಧಾನ ಪರಿಷತ್‌ ಸದಸ್ಯರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಅವರಿಗೆ ಹೆದರಿ ಕಾಂಗ್ರೆಸ್‌ನವರು ಹಣ ಹಂಚಿ
ದ್ದಾರೆ. ಚುನಾವಣೆ ಆಯೋಗಕ್ಕೆ ದೂರು ನೀಡಲಾಗಿದೆ’ ಎಂದರು.

ಹುಕ್ಕೇರಿ ವಿರುದ್ಧ ದೂರು: ವಾಯವ್ಯ ಶಿಕ್ಷಕ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಅವರ ಪರವಾಗಿ ಮತದಾರರಿಗೆ ಹಂಚಲು ಕಾರಿನಲ್ಲಿ ಕೊಂಡೊಯ್ಯತ್ತಿದ್ದ ₹17.40 ಲಕ್ಷ ನಗದನ್ನು ವಿಜಯನಗರದಲ್ಲಿ ವಶಪಡಿಸಿಕೊಂಡ ಘಟನೆ ಸಂಬಂಧ ವಾಯವ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣ ಶಹಾಪುರ ಅವರು ಡಿ.ಸಿ, ಎಸ್‌ಪಿಗೆ ಹುಕ್ಕೇರಿ ವಿರುದ್ಧ ದೂರು ನೀಡಿದ್ದಾರೆ.

ಕಾಂಗ್ರೆಸ್ ಗೆಲ್ಲುತ್ತೆ ಎಂದ ಜೆಡಿಎಸ್ ಎಂಎಲ್‌ಸಿ:(ಮೈಸೂರುವರದಿ): ‘ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ.ಮಾದೇಗೌಡ ಗೆಲ್ಲುತ್ತಾರೆ’ ಎಂದು ವಿಧಾನ ಪರಿಷತ್ ಜೆಡಿಎಸ್ ಸದಸ್ಯಮರಿತಿಬ್ಬೇಗೌಡ ಹೇಳಿದರು.ಮತ ಚಲಾಯಿಸಿದ ಬಳಿಕ ಮಾತನಾಡಿ, ‘ಕ್ಷೇತ್ರದಲ್ಲಿ ಅವರ ಪರವಾದ ಅಲೆ ಇದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT