ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಯಬಾಗ: ನಂದಿಕುರಳಿ ಕೆರೆಗೆ ಬಾಗಿನ ಅರ್ಪಣೆ

Published 16 ಜೂನ್ 2024, 13:08 IST
Last Updated 16 ಜೂನ್ 2024, 13:08 IST
ಅಕ್ಷರ ಗಾತ್ರ

ರಾಯಬಾಗ: ಕೆರೆ-ಕೊಳ್ಳಗಳು ಭರ್ತಿಯಾದರೆ ಅಂತರ್ಜಲ ಮಟ್ಟದಲ್ಲಿ ಏರಿಕೆಯಾಗಿ ಜನರಿಗೆ ನೀರಿನ ಬವಣೆ ತಪ್ಪುತ್ತದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ ಹೇಳಿದರು.

ತಾಲ್ಲೂಕಿನ ನಂದಿಕುರಳಿ ಗ್ರಾಮದಲ್ಲಿ ಕೆರೆಗೆ ಬಾಗಿನ ಅರ್ಪಣೆ ಮಾಡಿ ಅವರು ಮಾತನಾಡಿದರು.  ಶಿವನಗೌಡ ಪಾಟೀಲ ಮಾತನಾಡಿ, ‘ವರುಣನ ಕೃಪಾ ಕಟಾಕ್ಷದಿಂದ ಮಳೆ ಬಂದು ಹಲವಾರು ಕೆರೆ, ಕಟ್ಟೆಗಳಿಗೆ ನೀರು ಅಲ್ಪ ಸ್ವಲ್ಪ ಬಂದಿದೆ. ಹಳ್ಳ ಕೊಳ್ಳಗಳು ಹರಿದಿರುವುದರಿಂದ ಕುಡಿಯುವ ನೀರಿನ ಅಭಾವ ತಪ್ಪಿದಂತಾಗಿದೆ. ದನ ಕರುಗಳಿಗೆ ಮೇವಿನ ಕೊರತೆ ನೀಗಿದಂತಾಗಿದೆ. ಸಚಿವ ಸತೀಶ ಜಾರಕಿಹೊಳಿ ಅವರು ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ’ ಎಂದರು.

ಸುನೀಲ ಜಾಧವ, ಬಾಹುಸಾಹೇಬ ಪಾಟೀಲ, ಸಿದ್ದು ಬಂಡಗರ, ವಸಂತ ಕರಿಗಾರ, ನಾಮದೇವ ಕಾಂಬಳೆ, ಮಾರುತಿ(ಪಿಂಟು) ಕರಿಗಾರ, ಕಿರಣ ಕಾಂಬಳೆ, ಹಾಜಿ ಮುಲ್ಲಾ, ಸಂತೋಷ ಸಾವಂತ, ದತ್ತಾ ಮೋರೆ, ದಿಲೀಪ ಪಾಯನ್ನವರ, ಯಮನಪ್ಪ ಮಾಳಿ, ಸುರೇಶ ಕಾಂಬಳೆ ಸೇರಿದಂತೆ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT