ವಿನಯ್ ಕುಲಕರ್ಣಿ ಬಿಡುಗಡೆ ವೇಳೆ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ: ದೂರು ದಾಖಲು

ಬೆಳಗಾವಿ: ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹದ ಆವರಣದಲ್ಲಿ, ಮಾಜಿ ಸಚಿವ ಮತ್ತು ಕಾಂಗ್ರೆಸ್ ಮುಖಂಡ ವಿನಯ ಕುಲಕರ್ಣಿ ಬಿಡುಗಡೆ ವೇಳೆ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಹಿನ್ನೆಲೆಯಲ್ಲಿ 300 ಮಂದಿ ವಿರುದ್ಧ ಎರಡು ಪ್ರತ್ಯೇಕ ಪ್ರಕರಣ ಶನಿವಾರ ದಾಖಲಾಗಿವೆ.
ವಾರಾಂತ್ಯ ಕರ್ಫ್ಯೂ ಹಾಗೂ ಕೋವಿಡ್ ಮಾರ್ಗಸೂಚಿ ಉಲ್ಲಂಘನೆಗೆ ಸಂಬಂಧಿಸಿದಂತೆ ಗ್ರಾಮೀಣ ಠಾಣೆ ಪೊಲೀಸರು ಒಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಿಂಡಲಗಾ ಗ್ರಾಮ ಪಂಚಾಯ್ತಿ ಪಿಡಿಒ ಕೂಡ ದೂರು ನೀಡಿದ್ದಾರೆ. ಕರ್ನಾಟಕ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ಡಿಸಿಪಿ ವಿಕ್ರಂ ಅಮಟೆ ಮಾಹಿತಿ ನೀಡಿದರು.
ವಿನಯ ಕುಲಕರ್ಣಿ ಬಿಡುಗಡೆ: ರಾಖಿ ಕಟ್ಟಿ ಸ್ವಾಗತಿಸಿದ ಲಕ್ಷ್ಮಿ ಹೆಬ್ಬಾಳಕರ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.