ಮಂಗಳವಾರ, ಡಿಸೆಂಬರ್ 1, 2020
19 °C

ಹಿಂಡಲಗಾ ಜೈಲಿನಲ್ಲಿ ವಿನಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಗುರುವಾರ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.

ಸಿಬಿಐ ಹಾಗೂ ಪೊಲೀಸ್ ಅಧಿಕಾರಿಗಳು ಅವರನ್ನು ಬಿಗಿ ಭದ್ರತೆಯಲ್ಲಿ ರಾತ್ರಿ ಇಲ್ಲಿಗೆ ಕರೆತಂದರು. ಗಾಂಭೀರ್ಯದಿಂದ ಜೈಲಿನೊಳಗೆ ಹೋದ ವಿನಯ, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಲು ನಿರಾಕರಿಸಿದರು.

ಅವರನ್ನು ಒಂದು ದಿನದ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅವರನ್ನು ಇಲ್ಲಿಂದಲೇ ವಿಡಿಯೊ ಕಾನ್ಫರೆನ್ಸ್‌ ಮೂಲಕ ವಿಚಾರಣೆ ನಡೆಸಲು ಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

‘ಸಾಮಾನ್ಯ ಕೋಣೆಯಲ್ಲಿ ಅವರನ್ನು ಇರಿಸಲಾಗಿದೆ. ಕೋವಿಡ್–19 ಕಾರಣದಿಂದಾಗಿ ಯಾರ ಭೇಟಿಗೂ ಅವಕಾಶ ಇರುವುದಿಲ್ಲ’ ಎಂದು ಜೈಲಿನ ಅಧಿಕಾರಿಗಳು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.