ಶುಕ್ರವಾರ, ಫೆಬ್ರವರಿ 26, 2021
31 °C

ಕೆಂಪು ಕೋಟೆಗೆ ರೈತರ ಲಗ್ಗೆ: ತನಿಖೆಯಾಗಲಿ– ಸಚಿವ ರಮೇಶ ಜಾರಕಿಹೊಳಿ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ದೆಹಲಿಯಲ್ಲಿ ರೈತರು ನಡೆಸಿದ ಟ್ರ್ಯಾಕ್ಟರ್ ರ‍್ಯಾಲಿ ವೇಳೆ ಹಲವರು ಕೆಂಪುಕೋಟೆಗೆ ನುಗ್ಗಿ ಧ್ವಜ ಹಾರಿಸಿದ್ದಾರೆ. ಈ ಘಟನೆಯ ಹಿಂದೆ ಹಲವರ ಕೈವಾಡವಿರುವ ಶಂಕೆ ವ್ಯಕ್ತವಾಗುತ್ತಿದೆ. ಸಂಘರ್ಷದಲ್ಲಿ ಪಾಲ್ಗೊಂಡವರು ನಿಜವಾದ ರೈತರೇ, ಅಲ್ಲವೇ ಎನ್ನುವ ಬಗ್ಗೆ ತನಿಖೆಯಾಗಬೇಕು’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಇಲ್ಲಿ ಬುಧವಾರ ಒತ್ತಾಯಿಸಿದರು.

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ದೆಹಲಿಯಲ್ಲಿ ಟ್ರ್ಯಾಕ್ಟರ್‌ ರ‍್ಯಾಲಿ ವೇಳೆ ನಡೆದಿರುವ ಘಟನೆ ದುರದೃಷ್ಟಕರ. ಇದರಿಂದಾಗಿ ಭಾರತದ ಬಗ್ಗೆ  ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗಳು ಶುರುವಾಗಿದೆ. ಇಂತಹ ಘಟನೆಗಳಿಗೆ ಶತ್ರು ದೇಶಗಳ ಕುಮ್ಮಕ್ಕು ಇರುವ ಸಾಧ್ಯತೆಯೂ ಇದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ’ ಎಂದರು.

‘ಸುಪ್ರೀಂ ಕೋರ್ಟ್ ಕೂಡ ರೈತರೊಂದಿಗೆ ಚರ್ಚೆಗೆ ಸೂಚಿಸಿದೆ. ಕಾಯ್ದೆಗಳ ಬಗ್ಗೆ ಅನುಮಾನಗಳಿದ್ದರೆ ಬಗೆಹರಿಸಲು ಸಮಿತಿ ರಚಿಸಲಾಗಿದೆ. ಆದರೆ, ರೈತರು  ಚರ್ಚೆಗೆ ಸಿದ್ಧವಿಲ್ಲ; ಅಭಿಪ್ರಾಯಗಳನ್ನೂ ತಿಳಿಸುತ್ತಿಲ್ಲ. ಸುಮ್ಮನೆ ವಿರೋಧಿಸಿದರೆ ಹೇಗೆ? ಚರ್ಚೆಗೆ ಕೇಂದ್ರ ಸರ್ಕಾರ ಸಿದ್ಧವಿದೆ’ ಎಂದು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು