ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು)ದ 21ನೇ ವಾರ್ಷಿಕ ಘಟಿಕೋತ್ಸವವನ್ನು ಮಾರ್ಚ್ 10ರಂದು ಬೆಳಿಗ್ಗೆ 11.30ಕ್ಕೆ ಇಲ್ಲಿನ ಜ್ಞಾನಸಂಗಮ ಕ್ಯಾಂಪಸ್ನಲ್ಲಿ ನಡೆಯಲಿದೆ ಎಂದು ಕುಲಪತಿ ಡಾ.ಕರಿಸಿದ್ದಪ್ಪ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಧ್ಯಕ್ಷತೆ ವಹಿಸಲಿದ್ದಾರೆ. ಲೋಕಸಭೆ ಸಭಾಪತಿ ಓಂ ಬಿರ್ಲಾ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ತಾಂತ್ರಿಕ ಹಾಗೂ ವಿಜ್ಞಾನ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿದ ಮೂವರಿಗೆ ಡಾಕ್ಟರ್ ಆಫ್ ಸೈನ್ಸ್ ಗೌರವ ಪದವಿ ಪ್ರದಾನ ಮಾಡಲಾಗುವುದು. ಇನ್ಫೊಸಿಸ್ ಸಹ ಸಂಸ್ಥಾಪಕ ಸೇನಾಪತಿ ಕ್ರಿಶ್ ಗೋಪಾಲಕೃಷ್ಣನ್, ಹೈದರಾಬಾದ್ನ ಭಾರತ್ ಬಯೋಟೆಕ್ ನಿರ್ದೇಶಕ ವ್ಯವಸ್ಥಾಪಕ ನಿರ್ದೇಶಕ ಹಾಗೂ ಅಧ್ಯಕ್ಷ ಡಾ.ಕೃಷ್ಣ ಎಲ್ಲಾ ಹಾಗೂ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಹೈಎನರ್ಜಿ ಭೌತಿಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕಿ ಪ್ರೊ.ರೋಹಿಣಿ ಗೋಡಬೋಲೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

57,498 ಬಿಇ/ಬಿ.ಟೆಕ್, 902 ಬಿ.ಆರ್ಕ್., 12 ಬಿ ಪ್ಲಾನ್, 4,362 ಎಂಬಿಎ, 1,387 ಎಂಸಿಎ, 1,292 ಎಂ.ಟೆಕ್, 73 ಎಂ.ಆರ್ಕ್. ಮತ್ತು 33 ಪಿಜಿ ಡಿಪ್ಲೊಮಾ ಪದವಿಗಳನ್ನು ಪ್ರದಾನ ಮಾಡಲಾಗುವುದು. ಯಶಸ್ವಿಯಾಗಿ ಸಂಶೋಧನಾ ಅಧ್ಯಯನ ಮುಗಿಸಿದ ಸಂಶೋಧನಾರ್ಥಿಗಳಿಗೆ 515 ಪಿಎಚ್.ಡಿ., 4 ಎಂ.ಎಸ್ಸಿ. (ಎಂಜಿನಿಯರಿಂಗ್) ಬೈ ರಿಸರ್ಚ್ ಮತ್ತು 3 ಇಂಟಿಗ್ರೇಟೆಡ್ ಡುಯೆಲ್ ಡಿಗ್ರಿ ಪದವಿಗಳನ್ನು ಪ್ರದಾನ ಮಾಡಲಾಗುತ್ತದೆ ಎಂದು ವಿವರ ನೀಡಿದರು.

ರಾಯಚೂರಿನ ಎಸ್ಎಲ್ಎನ್ ಕಾಲೇಜಿನ ಬಿಇ ಸಿವಿಲ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಭುಶ್ರಾ ಮತೀನ್ ಒಟ್ಟು 16 ಚಿನ್ನದ ಪದಕಗಳನ್ನು ಪಡೆದಿದ್ದಾರೆ ಎಂದು ತಿಳಿಸಿದರು.

ಕುಲಸಚಿವರಾದ ಪ್ರೊ.ಎ.ಎಸ್.ದೇಶಪಾಂಡೆ ಮತ್ತು ಪ್ರೊ.ಬಿ.ಈ. ರಂಗಸ್ವಾಮಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.