ಪೈಪ್‌ಲೈನ್‌ಗೆ ಸೇರಿದ ಚರಂಡಿ ನೀರು
ಗ್ರಾಮದ ಬೋರ್‌ವೆಲ್‌ಗಳ ಮೂಲಕ ಓವರ್‌ಹೆಡ್ ಟ್ಯಾಂಕಿಗೆ ನೀರು ತುಂಬಿಸಲಾಗುತ್ತದೆ. ಅಲ್ಲಿಂದ ಮನೆಮನೆಗೆ ನಳಗಳ ಮೂಲಕ ಹರಿಸಲಾಗುತ್ತದೆ. ಮನೆಗಳಿಗೆ ನೀರು ಸರಬರಾಜು ಮಾಡುವ ಪೈಪ್‌ಲೈನಿನಲ್ಲಿ ಚರಂಡಿ ನೀರು ಸೇರಿಕೊಂಡಿದ್ದರಿಂದ ಈಗ ಅವಘಡ ಸಂಭವಿಸಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಸದ್ಯ ವೀರಭದ್ರೇಶ್ವರ ದೇವಸ್ಥಾನದ ಸುತ್ತಲಿನ ಪ್ರದೇಶದಲ್ಲಿ ಸಮಸ್ಯೆ ಉಲ್ಬಣವಾಗಿದೆ. ಇಡೀ ಊರಿಗೆ ಹಬ್ಬುವ ಮುನ್ನವೇ ಕ್ರಮ ವಹಿಸಬೇಕು ಎಂದೂ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ಮಹಾಂತೇಶ ಕೌಜಲಗಿ, ಅಧಿಕಾರಿ ಹಾಗೂ ಗ್ರಾಮಸ್ಥರಿಂದ ಮಾಹಿತಿ ಪಡೆದರು.