ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

43 ಸಾವಿರ ಅರ್ಜಿಗಳ ಸ್ವೀಕಾರ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ
Last Updated 16 ಡಿಸೆಂಬರ್ 2020, 15:36 IST
ಅಕ್ಷರ ಗಾತ್ರ

ಬೆಳಗಾವಿ: ‘ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯ ನಡೆದಿದ್ದು, ನ.18ರಿಂದ ಡಿ.16ರವರೆಗೆ ಸೇರ್ಪಡೆ, ತಿದ್ದುಪಡಿ ಸೇರಿದಂತೆ ಒಟ್ಟಾರೆ 43,215 ನಮೂನೆ (ಅರ್ಜಿ)ಗಳನ್ನು ಸ್ವೀಕರಿಸಲಾಗಿದೆ’ ಎಂದು ಜಿಲ್ಲೆಯ ಮತದಾರರ ಪಟ್ಟಿಯ ವೀಕ್ಷಕ ಎಲ್.ಕೆ. ಅತೀಕ್ ತಿಳಿಸಿದರು.

‘ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಡಿ.17 ಕಡೆಯ ದಿನವಾಗಿದೆ. ಸ್ವೀಕೃತವಾಗಿರುವ ಆಕ್ಷೇಪಣೆಗಳನ್ನು 2010ರ ಜ.7ರಂದು ಇತ್ಯರ್ಥಪಡಿಸಿ ಜ.18ರಂದು ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ನ.18ರಂದು ಮತದಾರರ ಕರಡು ಪಟ್ಟಿ ಪ್ರಕಟಿಸಲಾಗಿದ್ದು, ಅದರಂತೆ ಒಟ್ಟು 38, 26,715 ಮತದಾರರಿದ್ದಾರೆ. ಇದರಲ್ಲಿ 19,35,368 ಪುರುಷರು ಹಾಗೂ 18,91,347 ಮಹಿಳೆಯರು. 19,644 ಸೇವಾ ಮತದಾರರು ಮತ್ತು 24,571 ಅಂಗವಿಕಲ ಮತದಾರರು ಇದ್ದಾರೆ’ ಎಂದು ಹೇಳಿದರು.

‘ಜಿಲ್ಲೆಯಲ್ಲಿ ಒಟ್ಟು 63,743 ಯುವ ಮತದಾರರಿಗೆ ಬಣ್ಣದ ಪಿವಿಸಿ ಮತದಾರರ ಗುರುತಿನ ಚೀಟಿ ನೀಡಲಾಗಿದೆ. ಪಟ್ಟಿ ಪರಿಷ್ಕರಣೆ ಕಾರ್ಯ ನಿಗದಿತ ವೇಳಾಪಟ್ಟಿಯಂತೆ ನಡೆಸಲಾಗುತ್ತಿದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಲಹೆಗಳನ್ನು ಪಡೆಯಲಾಗಿದೆ. ಮನೆ ಮನೆಗೆ ಭೇಟಿ ನೀಡಿ ಪರಿಷ್ಕರಣೆ ಕಾರ್ಯದ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ರಾಜ್ಯದ ಜನಸಂಖ್ಯೆ ಆಧಾರದ ಪ್ರಕಾರ ಸರಾಸರಿ ಶೇ.71ರಷ್ಟು ಮತದಾರರಿದ್ದಾರೆ. ಜಿಲ್ಲೆಯ ಸರಾಸರಿ ಶೇ 70ರಷ್ಟಿದ್ದು, ಇನ್ನಷ್ಟು ಹೆಚ್ಚಳಕ್ಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ’ ಎಂದರು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಜಿಲ್ಲಾ ಪಂಚಾಯಿತಿ ಸಿಇಒ ದರ್ಶನ್ ಎಚ್.ವಿ., ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT