ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಜಿಲ್ಲೆಯಲ್ಲಿ ಮಿಂಚಿನ ನೋಂದಣಿ ಅಭಿಯಾನ

ಮತದಾರರ ಪಟ್ಟಿ ಪರಿಷ್ಕರಣೆಗೆ ಕ್ರಮ
Last Updated 6 ಜನವರಿ 2020, 14:19 IST
ಅಕ್ಷರ ಗಾತ್ರ

ಬೆಳಗಾವಿ: ‘ಚುನಾವಣಾ ಆಯೋಗದ ನಿರ್ದೇಶನದ ಪ್ರಕಾರ ಭಾವಚಿತ್ರವಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಅಂಗವಾಗಿ ಜ. 6ರಿಂದ 8ರವರೆಗೆ ಜಿಲ್ಲೆಯಲ್ಲಿ ಮಿಂಚಿನ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮಗ್ರ ಮತದಾರರ ಕರಡು ಮತದಾರರ ಪಟ್ಟಿಯನ್ನು 2019ರ ಡಿ.16ರಂದು ಪ್ರಕಟಿಸಲಾಗಿದೆ. ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಜ. 15ರವರೆಗೆ ಅವಕಾಶವಿರುತ್ತದೆ. ಹಕ್ಕು ಮತ್ತು ಆಕ್ಷೇಪಣೆಗಳನ್ನು ಜ. 29ರ ಒಳಗೆ ವಿಲೇವಾರಿ ಮಾಡಲಾಗುವುದು. ಫೆ. 4ರ ಒಳಗೆ ಪೂರಕ ಪಟ್ಟಿ ಸಿದ್ಧಪಡಿಸಲಾಗುವುದು. ಫೆ. 7ರಂದು ಮತದಾರರ ಅಂತಿಮ ಕರಡು ಪಟ್ಟಿ ಪ್ರಕಟಿಸಲಾಗುವುದು. ಇದಕ್ಕೆ ಪೂರಕವಾಗಿ ಪ್ರತಿ ಮತಗಟ್ಟೆ ಮಟ್ಟದಲ್ಲೂ ಮಿಂಚಿನ ನೋಂದಣಿ ಅಭಿಯಾನ ನಡೆಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

‘ಬಿ.ಎಲ್.ಒ.ಗಳು ಮತ್ತು ಬಿ.ಎಲ್.ಒ. ಮೇಲ್ವಿಚಾರಕರು ಜ. 8ರವರೆಗೆ ತಮ್ಮ ಮತಗಟ್ಟೆ ವ್ಯಾಪ್ತಿಯಲ್ಲಿ ಬೆಳಿಗ್ಗೆ 8ರಿಂದ ಸಂಜೆ 6ರವರೆಗೆ ಹಾಜರಿರಲಿದ್ದಾರೆ. ಜನರು ಮತದಾರರ ಪಟ್ಟಿಯನ್ನು ವ್ಯಾಪ್ತಿಯ ಬಿ.ಎಲ್.ಒ. ಬಳಿ ಪರಿಶೀಲಿಸಿಕೊಂಡು ಹೆಸರು ಸೇರ್ಪಡೆ ಮಾಡಬಹುದು. ಅಂತೆಯೇ ಹೆಸರು ಪರಿಷ್ಕರಣೆ, ವಿಳಾಸ ಬದಲಾವಣೆ ಕುರಿತು ನಿಗದಿತ ನಮೂನೆ ಪಡೆದು, ಅಲ್ಲಿಯೇ ಭರ್ತಿ ಮಾಡಿ ಸಲ್ಲಿಸಬಹುದು’ ಎಂದು ತಿಳಿಸಿದರು.

‘ಅರ್ಹತಾ ದಿನಾಂಕ 01.01.2020ಕ್ಕೆ 18 ವರ್ಷ ತುಂಬಿದ ಮತ್ತು ಮೇಲ್ಪಟ್ಟವರು ತಮ್ಮ ಸಂಬಂಧಿತ ವಿಧಾನಸಭಾ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ, ಹೆಸರು ಕೈಬಿಡಲು, ತಪ್ಪುಗಳ ತಿದ್ದುಪಡಿ ಹಾಗೂ ವಿಳಾಸ ಬದಲಾವಣೆಗೆ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದು. ಈಗಾಗಲೇ ಪಟ್ಟಿಯಲ್ಲಿ ಹೆಸರು ನಮೂದಾಗಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ’ ಎಂದು ಸ್ಪಷ್ಟಪಡಿಸಿದರು. ಚುನಾವಣಾ ತಹಶೀಲ್ದಾರ್‌ ಎನ್.ಬಿ. ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT