ಗುರುವಾರ , ಜನವರಿ 21, 2021
30 °C

ವಿಟಿಯು: ಬಿ.ಟೆಕ್., ಪಿ.ಜಿ. ಕೋರ್ಸ್‌ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಇಲ್ಲಿನ ವಿಟಿಯು ತನ್ನ ಕ್ಯಾಂಪಸ್‌ನಲ್ಲೇ ಆರಂಭಿಸಿರುವ ವಸತಿಸಹಿತ ಬಿ.ಟೆಕ್. ಹಾಗೂ ಪಿ.ಜಿ. ಕೋರ್ಸ್‌ಗಳನ್ನು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಂಗಳವಾರ ಉದ್ಘಾಟಿಸಿದರು.

ದೇಶದ ಪ್ರಮುಖ ಔದ್ಯೋಗಿಕ ರಂಗದ ದಿಗ್ಗಜರೊಂದಿಗೆ ಮತ್ತು ಕೇಂದ್ರ ಸರ್ಕಾರದ ಆರ್ ಅಂಡ್ ಡಿ ಸಂಸ್ಥೆಗಳ ಸಹಭಾಗಿತ್ವದಲ್ಲಿ 4 ವರ್ಷದ ಬಿ.ಟೆಕ್. ಹಾಗೂ  ಪಿ.ಜಿ. ಕೋರ್ಸ್‌ಗಳನ್ನು ಈ ಶೈಕ್ಷಣಿಕ ವರ್ಷದಿಂದ ಆರಂಭಿಸಿದೆ. ಕಂಪ್ಯೂಟರ್ ಸೈನ್ಸ್ ಆಂಡ್ ಬಿಸಿನೆಸ್ ಸಿಸ್ಟಮ್, ರೊಬೊಟಿಕ್ಸ್ ಆಂಡ್ ಆಟೋಮೇಷನ್ ಹಾಗೂ ಮೆಕ್ಯಾನಿಕಲ್ ಆಂಡ್ ಸ್ಮಾರ್ಟ್ ಮ್ಯಾನುಫ್ಯಾಕ್ಚರಿಂಗ್ ಈ ಮೂರು ಕೋರ್ಸಗಳನ್ನು ಪರಿಚಯಿಸಲಾಗಿದೆ. ಇದಕ್ಕೆ ಎಐಸಿಟಿಇಯಿಂದ ಅನುಮೋದನೆ ದೊರೆತಿದೆ ಎಂದು ಅಧಿಕಾರಿಗಳು ತಿಳಿಸಿದರು.

ಕುಲಪತಿ ಪ್ರೊ.ಕರಿಸಿದ್ದಪ್ಪ, ಕುಲಸಚಿವರಾದ ಪ್ರೊ.ಎ.ಎಸ್. ದೇಶಪಾಂಡೆ, ಪ್ರೊ.ಸತೀಶ ಅಣ್ಣಿಗೇರಿ, ಹಣಕಾಸು ಅಧಿಕಾರಿಗಳಾದ ಎಂ.ಎ. ಸಪ್ನಾ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.