ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಟಿಯು ಘಟಿಕೋತ್ಸವ ಫೆ.8 ರಂದು

Last Updated 1 ಫೆಬ್ರುವರಿ 2020, 13:17 IST
ಅಕ್ಷರ ಗಾತ್ರ

ಬೆಳಗಾವಿ: ‘ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 19ನೇ ವಾರ್ಷಿಕ ಘಟಿಕೋತ್ಸವ ಇದೇ 8ರಂದು ಇಲ್ಲಿನ ವಿಶ್ವವಿದ್ಯಾಲಯದ ಡಾ.ಎಪಿಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ನಡೆಯಲಿದೆ’ ಎಂದು ಕುಲಪತಿ ಡಾ.ಕರಿಸಿದ್ದಪ್ಪ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ’ಘಟಿಕೋತ್ಸವದಲ್ಲಿ 58,827 ಬಿಇ, 744 ಬಿ.ಆರ್ಕಿಟೆಕ್ಚರ್‌, 4,606 ಎಂಬಿಎ, 1,325 ಎಂಸಿಎ, 1,582 ಎಂ.ಟೆಕ್, 39 ಎಂ.ಆರ್ಕಿಟೆಕ್ಚರ್‌, 479 ಪಿಎಚ್‌ಡಿ, ಹಾಗೂ 21 ಎಂ.ಎಸ್ಸಿ ಸೇರಿ ಒಟ್ಟು 66,378 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು’ ಎಂದರು.

ರಾಷ್ಟ್ರೀಯ ಮಾನ್ಯತಾ ಮಂಡಳಿ ಅಧ್ಯಕ್ಷ ಪ್ರೊ.ಕೆ.ಕೆ.ಅಗರವಾಲ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ ನಾರಾಯಣ ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ವೇಳೆ ಬೆಂಗಳೂರು ಇಸ್ರೋ ಅಧ್ಯಕ್ಷ ಡಾ.‌ಕೆ.ಶಿವನ್ ಇವರಿಗೆ ’ಡಾಕ್ಟರ್ ಆಫ್ ಸೈನ್ಸ್’ ಗೌರವ ಪದವಿ ಪ್ರದಾನ ಮಾಡಲಾಗುವುದು ಎಂದು ಹೇಳಿದರು.

ಟಾಪರ್‌: ಮಂಗಳೂರಿನ ಸಿವಿಲ್ ಬ್ರ್ಯಾಂಚ್ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ಮಹಿಮಾ‌ ಎಸ್. ರಾವ್ 13 ಚಿನ್ನದ ಪದಕ, ಮೂಡುಬಿದಿರೆಯ ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸನ್ಮತಿ ಎಸ್.ಪಾಟೀಲ 11 ಚಿನ್ನದ ಪದಕ, ಬೆಂಗಳೂರಿನ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ವಿದ್ಯಾ ಜಿ.ಎಸ್. 7 ಚಿನ್ನದ ಪದಕ, ಮೈಸೂರಿನ ಜಿಎಸ್‌ಎಸ್‌ಎಸ್‌ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಅಂಡ್‌ ಟೆಕ್ನಾಲಜಿಯ ದಿವ್ಯಾ ಚಟ್ಟಿ 6 ಚಿನ್ನದ ಪದಕ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರನ ವಿವೇಕಾನಂದ ಕಾಲೇಜ್ ಆಫ್‌ ಎಂಜಿನಿಯರಿಂಗ್ ಟೆಕ್ನಾಲಜಿಯ ಸಿಂಧೂರ ಸರಸ್ವತಿ ಅವರು 6 ಚಿನ್ನದ ಪದಕ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT