ಸೋಮವಾರ, ಆಗಸ್ಟ್ 26, 2019
27 °C

ವಿಟಿಯು: ಸಂಭ್ರಮದ ಸ್ವಾತಂತ್ರ್ಯೋತ್ಸವ

Published:
Updated:
Prajavani

ಬೆಳಗಾವಿ: ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ 73ನೇ ಸ್ವಾತಂತ್ರೋತ್ಸವವನ್ನು ಗುರುವಾರ ಸಂಭ್ರಮದಿಂದ ಆಚರಿಸಲಾಯಿತು.

ಕುಲಪತಿ ಡಾ.ಕರಿಸಿದ್ದಪ್ಪ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ‘ಸ್ವಾತಂತ್ರ್ಯ ನಂತರವೂ ನಮ್ಮ ದೇಶ ನೈಸರ್ಗಿಕ ವಿಕೋಪಗಳಂತಹ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದೆ. ಇಂತಹ ವಿಕೋಪಗಳಿಗೆ ಒಳಗಾದ ನಿರಾಶ್ರಿತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಲ್ಲಿ ಎಂಜಿನಿಯರ್‌ಗಳು ಹಾಗೂ ತಂತ್ರಜ್ಞರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಯುವ ಎಂಜಿನಿಯರ್‌ಗಳು ತಮ್ಮ ಕರ್ತವ್ಯಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸಬೇಕು’ ಎಂದು ಸಲಹೆ ನೀಡಿದರು.

ಕುಲಸಚಿವರಾದ ಡಾ.ಎ.ಎಸ್. ದೇಶಪಾಂಡೆ, ಡಾ.ಸತೀಶ ಅಣ್ಣಿಗೇರಿ, ಹಣಕಾಸು ಅಧಿಕಾರಿ ಎಂ.ಎ. ಸಪ್ನಾ, ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Post Comments (+)