ಗುರುವಾರ , ಆಗಸ್ಟ್ 18, 2022
23 °C

ತೌಕ್ತೆ ಪರಿಣಾಮ ನಿರಂತರ ಮಳೆ: ಮನೆಯ ಗೋಡೆ ಕುಸಿದು ಅಜ್ಜಿ-ಮೊಮ್ಮಗ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಬೆಳಗಾವಿ: 'ತೌಕ್ತೆ' ಚಂಡಮಾರುತದ ಪರಿಣಾಮ ಶನಿವಾರ ತಡರಾತ್ರಿಯಿಂದ ಜೋರು ಗಾಳಿ ಹಾಗೂ ಮಳೆಯಿಂದ ಮನೆಯ ಗೋಡೆ ಕುಸಿದಿದ್ದರಿಂದ ಅದರಲ್ಲಿ ಸಿಲುಕಿ ಅಜ್ಜಿ- ಮೊಮ್ಮಗ ಸಾವಿಗೀಡಾದ ಘಟನೆ ಖಾನಾಪುರ ತಾಲ್ಲೂಕಿನ ಇಟಗಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ದೊಡ್ಡವ್ವ ರುದ್ರಪ್ಪ ಪಟ್ಟೇದ (55) ಮತ್ತು ಅವರ ಮೊಮ್ಮಗ ಅಭಿಷೇಕ ಸುರೇಶ ಪಟ್ಟೇದ (3) ಮೃತರು.

ದೊಡ್ಡವ್ವ ಅವರ ಪುತ್ರ ಸುರೇಶ ಹಾಗೂ ಸೊಸೆ ಮಂಜುಳಾ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಅದೇ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.

ಸ್ಥಳಕ್ಕೆ ನಂದಗಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು