ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಲಹೊಂಗಲ: ವಿದ್ಯಾರ್ಥಿಗಳಿಗೆ ಸಿಹಿ, ಹೂ ನೀಡಿ ಸ್ವಾಗತ

Last Updated 17 ಮೇ 2022, 3:57 IST
ಅಕ್ಷರ ಗಾತ್ರ

ಬೈಲಹೊಂಗಲ: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಸೋಮವಾರ ಶಾಲೆಗಳು ಆರಂಭವಾದವು. ಕೆಲ ಶಾಲೆಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಪುಷ್ಪ ನೀಡಿ ಸ್ವಾಗತಿಸಿದರು.

ಶಾಲಾ ಪ್ರಾರಂಭೋತ್ಸವ ಅಂಗವಾಗಿ ಎಲ್ಲ ಶಾಲೆಗಳಲ್ಲಿ ರಂಗೋಲಿ ಬಿಡಿಸಿ, ತಳಿರು ತೋರಣ ಕಟ್ಟಿ ಶೃಂಗರಿಸಲಾಗಿತ್ತು. ಪ್ರತಿ ಶಾಲಾ ಕೊಠಡಿಗಳನ್ನು ಸುಣ್ಣ, ಬಣ್ಣ ಹಚ್ಚಿ ಶುಚಿಗೊಳಿಸಿ ಹೂ ಮಾಲೆ ಹಾಕಿ ಅಲಂಕರಿಸಲಾಗಿತ್ತು.

ಬೂದಿಹಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ವಿಶಿಷ್ಟವಾಗಿ ನಡೆಯಿತು. ವಿದ್ಯಾರ್ಥಿಗಳನ್ನು ಶಾಲೆಯ ಶಿಕ್ಷಕರು ಹೂ, ಸಿಹಿ ನೀಡುವುದರ ಮೂಲಕ ಸ್ವಾಗತಿಸಿದರು. ಸರಸ್ವತಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಶಾಲೆಯಲ್ಲಿ ಶ್ರಮದಾನ ನಡೆಯಿತು. ಮಕ್ಕಳಿಗೆ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು.

ಮುಖ್ಯಶಿಕ್ಷಕ ಎನ್.ಆರ್.ಠಕ್ಕಾಯಿ ಮಾತನಾಡಿದರು. ಶಿಕ್ಷಕರಾದ ಜಗದೀಶ ನರಿ, ಪ್ರವೀಣ ಗುರುನಗೌಡರ, ಸುನೀಲ ಭಜಂತ್ರಿ, ಶಿವಾನಂದ ಬಳಿಗಾರ, ಶ್ರೀಪಾಲ ಚೌಗಲಾ, ವಿ.ಎಂ. ಕುರಿ, ಎಂ.ಬಿ. ಹೊಂಗಲ, ಅಡುಗೆ ಸಹಾಯಕರಾದ ಮಹಾದೇವಿ ಸೊಗಲದ, ಗಂಗವ್ವ ಅಳಗೋಡಿ, ಎಸ್‌ಡಿಎಂಸಿ ಪದಾಧಿಕಾರಿಗಳು, ಪಾಲಕರು ಇದ್ದರು. ವಿದ್ಯಾರ್ಥಿನಿ ಸಾಕ್ಷಿ ನಾಗನ್ನವರ ನಿರೂಪಿಸಿದರು. ಮರಕುಂಬಿ ಎಲ್.ಆರ್.ಪಾಟೀಲ ಸರ್ಕಾರಿ ಪ್ರೌಢಶಾಲೆಯಲ್ಲಿಯೂ ಕಲಿಕಾ ಚೇತರಿಕೆ, ಶಾಲಾ ಪ್ರಾರಂಭೋತ್ಸವ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT