ಶುಕ್ರವಾರ, ಫೆಬ್ರವರಿ 28, 2020
19 °C

ಬೆಳಗಾವಿ| ನೀರಿನ ಕೊರತೆ: ಮೈಮೇಲೆ ನೀರು ಸುರಿದುಕೊಂಡು ಪ್ರತಿಭಟನೆ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ತಾಲ್ಲೂಕಿನ ಭೂತರಾಮನಹಟ್ಟಿಯಲ್ಲಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕೋತ್ತರ ಹಾಸ್ಟೆಲ್‌ನಲ್ಲಿ ನೀರಿನ ಅಭಾವದಿಂದ ಮುಕ್ತಿ ನೀಡದಿರುವ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡ ವಿದ್ಯಾರ್ಥಿಗಳು, ಕ್ಯಾಂಪಸ್‌ನ ಮುಖ್ಯ ದ್ವಾರದ ಬಳಿ ಮೈಮೇಲೆ ನೀರು ಸುರಿದುಕೊಂಡು ಬುಧವಾರ ವಿನೂತನವಾಗಿ ಪ್ರತಿಭಟನೆ ನಡೆಸಿದರು.

‘ನೀರಿನ ತೊಂದರೆ ಇರುವ ಕುರಿತು ವಾರ್ಡನ್‌ ಹಾಗೂ ಅಧಿಕಾರಿಗಳ ಗಮನಕ್ಕೆ ಹಲವು ಬಾರಿ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಅವರು ಭರವಸೆ ನೀಡಿ ಸಮಾಧಾನಪಡಿಸಿದ್ದಾರೆಯೇ ಹೊರತು ಸಮಸ್ಯೆ ಬಗೆಹರಿದಿಲ್ಲ. ಕುಡಿಯುವ ನೀರಿಗೂ ಪರದಾಡುವಂತಾಗಿದೆ’ ಎಂದು ಆರೋಪಿಸಿದರು.

‘ಬೇರೆ ಕಡೆಗೆ ಹೋಗಿ ನೀರು ತರಬೇಕಾದ ಸ್ಥಿತಿ ಇದೆ. ಕೆಲವು ವಿದ್ಯಾರ್ಥಿಗಳು ಭೂತರಾಮನಹಟ್ಟಿಯಿಂದ ನೀರು ತರುತ್ತಿದ್ದಾರೆ. ಕೂಡಲೇ ಈ ಸಮಸ್ಯೆ ಬಗೆಹರಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

‘ಸಮಸ್ಯೆ ಪರಿಹರಿಸಲಾಗಿದೆ. ಟ್ಯಾಂಕರ್‌ ತರಿಸಿ ನೀರು ಪೂರೈಸಲಾಗಿದೆ’ ಎಂದು ಕುಲಸಚಿವ ಬಸವರಾಜ ಪದ್ಮಶಾಲಿ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು