ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಿಂಗ್‌ ರೋಡ್‌: ಗಡ್ಕರಿಗೆ ಮನವಿ’

Last Updated 13 ಫೆಬ್ರುವರಿ 2021, 10:12 IST
ಅಕ್ಷರ ಗಾತ್ರ

ಬೆಳಗಾವಿ: ‘ನಗರದಲ್ಲಿ ರಿಂಗ್ ರೋಡ್ (ವರ್ತುಲ ರಸ್ತೆ) ನಿರ್ಮಾಣಕ್ಕೆ ಅನುದಾನ ಕೋರಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಶೀಘ್ರವೇ ಮನವಿ ಸಲ್ಲಿಸಲಿದ್ದೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.

ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ವರ್ತುಲ ರಸ್ತೆ ನಿರ್ಮಾಣದ ಬಗ್ಗೆ ಈ ಬಜೆಟ್‌ನಲ್ಲಿ ಘೋಷಿಸುವಂತೆ ಮಾಡಲು ಯತ್ನಿಸುತ್ತಿದ್ದೇನೆ’ ಎಂದರು.

‘ಮೊದಲ ಹಂತದಲ್ಲಿ ₹ 174 ಕೋಟಿ ಬೇಕಾಗುತ್ತದೆ. ಇದಕ್ಕಾಗಿ ಕ್ರಮ ವಹಿಸಲಾಗಿದೆ’ ಎಂದು ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಹೇಳಿದರು.

‘ಸಾಂಬ್ರಾ ರಸ್ತೆ ನಾಲ್ಕು ಪಥ ಮಾಡಬೇಕು ಎಂದು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ₹ 25 ಕೋಟಿ ಕೇಳಿದ್ದೇವೆ. ಕೋವಿಡ್ ಕಾರಣದಿಂದ ಅಭಿವೃದ್ಧಿ ಕುಂಠಿತವಾಗಿದೆ. ಇನ್ಮುಂದೆ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತಗೊಳಿಸಲಾಗುವುದು’ ಎಂದು ಭರವಸೆ ನೀಡಿದರು.

‘ಈ ಬಾರಿಯ ಬಜೆಟ್‌ನಲ್ಲಿ ಜಲಸಂಪನ್ಮೂಲ ಇಲಾಖೆಗೆ ಹೆಚ್ಚಿನ ಅನುದಾನ ದೊರೆಯುವ ನಿರೀಕ್ಷೆ ಇದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ಜಿಲ್ಲಾ ಪಂಚಾಯ್ತಿ ಸದಸ್ಯ ರಮೇಶ ದೇಶಪಾಂಡೆ, ವಕ್ತಾರ ಹನುಮಂತ ಕೊಂಗಾಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT