‘ಮುನಿರತ್ನ ಬಂಧಿಸಲು ಕಾಂಗ್ರೆಸ್‌ನವರ ದ್ವೇಷ ರಾಜಕಾರಣವೇ ಕಾರಣ’ ಎಂಬ ಬಿಜೆಪಿಯವರ ಆರೋಪಕ್ಕೆ, ಇಲ್ಲಿ ಭಾನುವಾರ ಸುದ್ದಿಗಾರರಿಗೆ ಅವರು ಹೀಗೆ ಪ್ರತಿಕ್ರಿಯಿಸಿದರು.
‘ಮುನಿರತ್ನ ಬಂಧಿಸಲು ಯಾರು ದ್ವೇಷದ ರಾಜಕಾರಣ ಮಾಡುತ್ತಾರೆ? ಬೈಯಿರಿ ಅಥವಾ ಬ್ಲ್ಯಾಕ್‌ಮೇಲ್ ಮಾಡಿ ಎಂದು ಕಾಂಗ್ರೆಸ್ ನಾಯಕರು ಅವರಿಗೆ ಹೇಳಿದ್ದಾರಾ? ಮಾಡಿದ್ದುಣ್ಣೋ ಮಾರಾಯ ಎನ್ನುವ ಸ್ಥಿತಿ ಅವರದ್ದಾಗಿದೆ’ ಎಂದು ದೂರಿದರು.
‘ಮಹಿಳೆಯರ ಬಗ್ಗೆ ಮುನಿರತ್ನ ಆಡಿದ ಕೀಳು ಮಾತುಗಳನ್ನು ಯಾರೂ ಸಹಿಸಲು ಸಾಧ್ಯವಿಲ್ಲ. ಜಾತಿ, ಜಾತಿಗಳ ಮಧ್ಯೆ ಸಂಘರ್ಷ ತರುವಂತಹ ಮಾತುಗಳನ್ನು ಯಾರೂ ಕೂಡ ಆಡಬಾರದು’ ಎಂದರು.