ಬೆಳಗಾವಿ: ‘ಬಿಜೆಪಿಯನ್ನು ನಿಯಂತ್ರಿಸದೆ ಹೋದರೆ ಮುಂದಿನ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆ ಮತ್ತಷ್ಟು ಏರಿಕೆ ಆಗುತ್ತದೆ’ ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಹೇಳಿದರು.

ತಾಲ್ಲೂಕಿನ ಸಾಂಬ್ರಾ ಗ್ರಾಮದಲ್ಲಿ ಬುಧವಾರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಈಗಾಗಲೇ ಗ್ರಾಮೀಣ ಕ್ಷೇತ್ರದಲ್ಲಿ ಬೃಹತ್ ಸಮಾವೇಶ ಮಾಡಲಾಗಿದೆ. ಅಪಾರ ಪ್ರಮಾಣದಲ್ಲಿ ಬೆಂಬಲ ವ್ಯಕ್ತವಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆ ತೆರಳಿ ಪ್ರಚಾರ ನಡೆಸಬೇಕು’ ಎಂದು ತಿಳಿಸಿದರು.

ಓದಿ:ಕಾಂಗ್ರೆಸ್ ಪಕ್ಷದಲ್ಲಿ ನಿರ್ದಿಷ್ಟತೆ ಇಲ್ಲ, ಎಡಬಿಡಂಗಿತನ ಕಾಣುತ್ತಿದೆ: ಸಿ.ಟಿ.ರವಿ

'ಮೂರು ವರ್ಷಗಳಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರು ಅನೇಕ ಅಭವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಅವರ ಕೆಲಸಗಳನ್ನು ಗುರುತಿಸಿ, ಕಾಂಗ್ರೆಸ್ ಬೆಂಬಲಿಸಬೇಕು. ಲೋಕಸಭೆಗೆ ಆಯ್ಕೆಯಾದ ಬಳಿಕ ಈ ಭಾಗದ ಶಾಸಕ ಜೊತೆ ಸೇರಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ’ ಎಂದು ಭರವಸೆ ನೀಡಿದರು.

‘ಕಾಂಗ್ರೆಸ್ ಪಕ್ಷಕ್ಕೆ ಯಾಕೆ ಮತ ನೀಡಬೇಕು ಎನ್ನುವುದು ನಿಮಗೂ ಗೊತ್ತಿದೆ. ತೈಲ ಬೆಲೆ, ದಿನನಿತ್ಯ ಬಳಕೆ ವಸ್ತುಗಳ ಬೆಲೆ ಗಗನಕ್ಕೇರಿವೆ. ಇದು ಈ ಉಪ ಚುನಾವಣೆಯಲ್ಲಿ ಒಂದು ವಿಷಯವಾಗಬೇಕು’ ಎಂದು ಹೇಳಿದರು.

ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ, ಮುಖಂಡ ಚನ್ನರಾಜ ಹಟ್ಟಿಹೊಳಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.